October 5, 2024

ರಾಜ್ಯ ಸರ್ಕಾರ ಸಹಕಾರಿ ಸಂಘಗಳ ಮೂಲಕ ಮರುಜಾರಿಗೆ ತರುತ್ತಿರುವ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಇದೇ ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ.

2022-23ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಘೋಷಣೆ ಮಾಡಿದಂತೆ ಇದೀಗ ಯೋಜನೆಗೆ ಅನುಮೋದನೆ ನೀಡಿದ್ದು ಯೋಜನೆಗೆ ರೂ. 300 ಕೋಟಿ ಆಯವ್ಯಯದ ಅವಕಾಶ ಕಲ್ಪಿಸಿ ಯೋಜನೆಯನ್ನು ಘೋಷಿಸಿದೆ. 2022-23ನೇ ಸಾಲಿಗೆ ಸಂಬಂಧಿಸಿದಂತೆ ಯಶಸ್ವಿನಿ ಯೋಜನೆಯಡಿ ಸದಸ್ಯತ್ವ ನೋಂದಣಿ ಪ್ರಕ್ರಿಯೆ 2022ರ ನವೆಂಬರ್ 1ರಿಂದ ಪ್ರಾರಂಭವಾಗಿದೆ.

ರಾಜ್ಯದಲ್ಲಿ ಯಾವುದೇ ಸಹಕಾರಿ ಸಂಸ್ಥೆಗಳ ಸದಸ್ಯರಾದವರ ಮತ್ತು ಸಹಕಾರಿ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ ಸದಸ್ಯರಾದವರ ಕುಟುಂಬದವರಿಗೆ ಈ ಯೋಜನೆ ಅನ್ವಯವಾಗುತ್ತದೆ.

2023ರ ಜನವರಿ 1ರಿಂದ ಯಶಸ್ವಿನಿ ಯೋಜನೆಯಡಿ ವಿಮಾಸೌಲಭ್ಯ ಜಾರಿಗೆ ಬರುತ್ತದೆ.

ಗ್ರಾಮೀಣ ಪ್ರದೇಶದ 4 ಜನರ ಕುಟುಂಬಕ್ಕೆ ರೂ. 500-00 ಹಾಗೂ ನಗರ ಪ್ರದೇಶದ 4 ಜನರ ಕುಟುಂಬಕ್ಕೆ ರೂ. 1000-00 ಹಣ ಪಾವತಿಸಿ ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು. ಕುಟುಂಬದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರಿದ್ದರೆ ಗ್ರಾಮೀಣ ಭಾಗದಲ್ಲಿ ತಲಾ ಒಬ್ಬರಿಗೆ ರೂ. 100 ಹಾಗೂ ನಗರ ಪ್ರದೇಶದಲ್ಲಿ ರೂ. 200 ಹೆಚ್ಚುವರಿ ಶುಲ್ಕ ಪಾವತಿಸಬೇಕು.

ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ತಾವು ಸದಸ್ಯರಾಗಿರುವ ಸಹಕಾರ ಸಂಘಗಳನ್ನು ನೇರವಾಗಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದು ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ. ಇದುವರೆಗೂ ಹೆಸರು ನೊಂದಾಯಿಸಿಕೊಳ್ಳದವರು ಡಿಸೆಂಬರ್ 31ರ ಒಳಗಾಗಿ ಹೆಸರು ನೊಂದಾಯಿಸಿಕೊಳ್ಳಲು ಅವಕಾಶವಿದೆ.

ತುರ್ತು ಆರೋಗ್ಯ ಸಮಸ್ಯೆಯಾದಾಗ ಈ ಯೋಜನೆ ಬಹಳ ಅನುಕೂಲಕರವಾಗಿದ್ದು, ಕುಟುಂಬಕ್ಕೆ ರೂ. 5 ಲಕ್ಷದ ವರೆಗೆ ಆರೋಗ್ಯ ರಕ್ಷಾ ವಿಮೆ ಸೌಲಭ್ಯವಿರುತ್ತದೆ.

ಹೆಸರು ನೊಂದಾಯಿಸಲು ನಿಗದಿತ ನೋಂದಣಿ ಶುಲ್ಕದೊಂದಿಗೆ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ ಮತ್ತು 2 ಪಾಸ್ ಪೋರ್ಟ್ ಅಳತೆಯ ಪೋಟೋ ನೀಡಬೇಕಾಗುತ್ತದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ