October 5, 2024

ಮೂಡಿಗೆರೆ ಪಟ್ಟಣದ ಪ್ರೀತಂ ಕಲ್ಯಾಣ ಮಂಟಪದಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಹಾಗೂ ಮೂಡಿಗೆರೆ ಪೊಲೀಸ್ ಠಾಣೆ ವತಿಯಿಂದ ನಿನ್ನೆ ಜನ ಸಂಪರ್ಕಸಭೆ, ಶಾಲೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರು ವಿವಿಧ ಸಮಸ್ಯೆಗಳ ಬಗ್ಗೆ ಸಭೆ ಗಮನಕ್ಕೆ ತಂದರು.

ಸಭೆಯಲ್ಲಿ ವಿವಿಧ ಸಂಘಟನೆ ಮುಖಂಡರು ಹಾಗೂ ಸಾರ್ವಜನಿಕರು ಮಾತನಾಡಿ, ಅಸ್ಸಾಂ ಕಾರ್ಮಿಕರು ನಕಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದಾರೆ ಈ ಬಗ್ಗೆ ತನಿಖೆಯಾಗಬೇಕು. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಮಿತಿ ಮೀರಿದೆ, ವ್ಯವಸ್ಥಿತವಾಗಿ ನಿರ್ವಹಣೆಯಾಗುತ್ತಿಲ್ಲ. ಶಿವರಾತ್ರಿಯಲ್ಲಿ ಲಕ್ಷಾಂತರ ಭಕ್ತರು ಧರ್ಮಸ್ಥಳಕ್ಕೆ ಪಾದಯಾತ್ರೆ ಬರುತ್ತಾರೆ, ಸ್ವಚ್ಛತೆಗೆ ಗಮನ ನೀಡುವುದಿಲ್ಲ. ರಸ್ತೆ ಬದಿಯಲ್ಲಿ ಅಲ್ಲಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಿಸಬೇಕು. ಅಪ್ರಾಪ್ತರಿಂದ ವಾಹನ ಚಲಾವಣೆ ಹೆಚ್ಚಾಗಿದೆ. ಪೋಷಕರಿಗೆ ದಂಡ ವಿಧಿಸಬೇಕು. ಮಟ್ಕಾ ಮತ್ತು ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎಂದು ದೂರಿದ್ದಾರೆ.

ಮಡ್ಡಿಕೆರೆ ಗ್ರಾಮಸ್ಥರು ಗ್ರಾಮಕ್ಕೆ ತೆರಳುವ ರಸ್ತೆಯನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಬೇಕೆಂದು ಎಸ್ಪಿಯವರಿಗೆ ಮನವಿ ಮಾಡಿದರು.

ಸಾರ್ವಜನಿಕರ ಅಹವಾಲು ಆಲಿಸಿದ ಬಳಿಕ ಎಸ್ಪಿ ಉಮಾ ಪ್ರಶಾಂತ್  ಶಾಲಾ ಮಕ್ಕಳು ಮತ್ತು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, 18 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಮಕ್ಕಳಿಗಾಗಿ ಪೊಲೀಸ್ ಠಾಣೆಯನ್ನು ತೆರೆದ ಮನೆಯಾಗಿಸಲಾಗಿದ್ದು, ಇಲ್ಲಿಗೆ ಭೇಟಿ ನೀಡಿ ಠಾಣೆಯ ಕಾರ್ಯ ತಿಳಿದುಕೊಳ್ಳಬೇಕು. ತಮ್ಮ ಮೇಲಾದ ದೌರ್ಜನ್ಯ ದೂರುಗಳನ್ನು ಯಾವುದೇ ಭಯವಿಲ್ಲದೇ ಪೋಷಕರ ಗಮನಕ್ಕೆ ತಂದರೆ ಮಾನಸಿಕ, ದೈಹಿಕವಾದ ದೌರ್ಜನ್ಯ ತಡೆಯಲು ಸಹಕಾರಿಯಾಗುತ್ತದೆ. 109 ಮಕ್ಕಳ ಹೆಲ್ಪ್ ಲೈನ್ ಸಂಖ್ಯೆ ಉಪಯೋಗಿಸಬಹುದು ಎಂದ ಅವರು, ಅಸ್ಸಾಂ ಕಾರ್ಮಿಕರ ಮಾಹಿತಿಗಾಗಿ ವೆಬ್‍ಸೈಟ್ ತೆರೆದಿದ್ದು, ಅದಕ್ಕೆ ಎಸ್ಟೇಟ್ ಮಾಲೀಕರು ಅಸ್ಸಾಂ ಕಾರ್ಮಿಕರ ಸಂಪೂರ್ಣ ಮಾಹಿತಿ ದಾಖಲಿಸತಕ್ಕದ್ದು. ನಕಲಿ ಆಧಾರ್ ಕಾರ್ಡ್ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಶಿವರಾತ್ರಿ ಪಾದಯಾತ್ರೆಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಠಾಣೆಗೆ ತೆರಳಿ ದೂರು ಸಲ್ಲಿಸಲಾಗದ ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿದಲ್ಲಿ ಸ್ಥಳಕ್ಕೆ ಪೊಲೀಸ್ ವಾಹನ ತೆರಳಲಿದೆ. ಪೊಲೀಸರು ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರ ನೀಡಬೇಕು ಎಂದು ಹೇಳಿದರು.

ಡಿವೈಎಸ್‍ಪಿ ಪುರುಷೋತ್ತಮ್ ಮಾತನಾಡಿ, ಸಾಮಾಜಿಕ ಜವಾಬ್ದಾರಿ ಕೇವಲ ಪೊಲೀಸರಿಗೆ ಮಾತ್ರವಲ್ಲ. ಸಾರ್ವಜನಿಕರಲ್ಲೂ ಇರಬೇಕು. ಕಳೆದ ತಿಂಗಳು ಜಿಲ್ಲೆಯಲ್ಲಿ 4 ಫೋಕ್ಸೋ ಪ್ರಕರಣ ದಾಖಲಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ವಿದ್ಯಾರ್ಥಿಗಳು ಹರೆಯದ ವಯಸ್ಸಿನಲ್ಲಿ ಪುರುಷರೊಂದಿಗೆ ಆಕರ್ಷಿತಗೊಳಗಾದರೆ ಮುಂದಿನ ಭವಿಷ್ಯದ ಮೇಲೆ ದುಷ್ಟರಿಣಾಮ ಬೀರುತ್ತದೆ. ಪೋಷಕರು ಈ ಬಗ್ಗೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಮಾತ್ರ ಇಂಟರ್‍ನೆಟ್ ಬಳಸಬೇಕು. ಅಪರಿಚಿತ ವ್ಯಕ್ತಿ ಪರಿಚಯ ಮಾಡಿಕೊಂಡು ಸಂಪರ್ಕ ಬೆಳೆಸಬಾರದು. ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಮೂಲಕ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ಮೂಡಿಗೆರೆ ಠಾಣೆ ವೃತ್ತನಿರೀಕ್ಷಕ ಸೋಮೇಗೌಡ, ಠಾಣಾಧಿಕಾರಿ ಆದರ್ಶ್ ಮತ್ತು ಠಾಣೆಯ ಸಿಬ್ಬಂದಿಗಳು ಜನಪಂಪರ್ಕ ಸಭೆಯನ್ನು ಉತ್ತಮವಾಗಿ ಆಯೋಜಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
****

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ