October 5, 2024

ಕಡೂರು ಕ್ಷೇತ್ರದ ಮಾಜಿ ಶಾಸಕ, ಜೆ.ಡಿ.ಎಸ್.ಹಿರಿಯ ಮುಖಂಡ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಾನಸ ಪುತ್ರನೆಂದೇ ಪ್ರಸಿದ್ಧಿ ಪಡೆದಿದ್ದ ಯಗಟಿ ಸೂರ್ಯನಾರಾಯಣ ವೆಂಕಟೇಶ ದತ್ತ (ವೈ.ಎಸ್.ವಿ. ದತ್ತ) ಅವರು ಜೆಡಿಎಸ್ ತೊರೆದು ಕಾಂಗ್ರೇಸ್ ನತ್ತ ಮುಖಮಾಡಿದ್ದಾರೆ.

ನಿನ್ನೆ ತನ್ನ ಸ್ವಗ್ರಾಮ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಸ್ನೇಹಿತರೊಡಗೂಡಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಮೂಲಕ ಸುಮಾರು ಐದು ದಶಕಗಳ ಅವರ ಜನತಾ ಪರಿವಾರದೊಂದಿಗಿನ ಒಡನಾಟ ಅಂತ್ಯವಾದಂತಾಗಿದೆ.

ದತ್ತ ಕಾಂಗ್ರೇಸ್ ಸೇರುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತಾದರೂ ಅವರು ಅದನ್ನು ಬಹಿರಂಗವಾಗಿ ಪ್ರಕಟಿಸಿರಲಿಲ್ಲ. ಆದರೆ ನಿನ್ನೆ ಅವರು ತಮ್ಮ ನಿರ್ಧಾರವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಜನವರಿ 15ರ ನಂತರ ಅವರು ಕಾಂಗ್ರೇಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗುವುದಾಗಿ ಪ್ರಕಟಿಸಿದ್ದಾರೆ.

ದತ್ತ ಅವರ ಆರಂಭದಿಂದಲೂ ದೇವೇಗೌಡರ ಕಟ್ಟಾ ಅನುಯಾಯಿಯಾಗಿ ಅವರೊಂದಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಹಾಕಿದ್ದರು. ರಾಜ್ಯ ಜೆ.ಡಿ.ಎಸ್. ಪ್ರಧಾನ ಕಾರ್ಯದರ್ಶಿಯಾಗಿ, ಜೆ.ಡಿ.ಎಸ್. ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು. 2006 ರಿಂದ 2012 ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು. 2013 ರ ವಿಧಾನ ಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಭರ್ಜರಿ ಬಹುಮತದೊಂದಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ದತ್ತ ಮಾಸ್ಟರ್ ಎಂದೇ ಜನಸಾಮಾನ್ಯರ ನಡುವೆ ಖ್ಯಾತಿ ಪಡೆದಿದ್ದ ಇವರು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಗಣಿತ ಪಾಠ ಮಾಡುತ್ತಾರೆ. ಸರಳತೆಗೆ ಮತ್ತು ಪ್ರಾಮಾಣಿಕತೆಗೆ ಮತ್ತೊಂದು ಹೆಸರಾಗಿದ್ದಾರೆ.

ಜೆ.ಡಿ.ಎಸ್.ನಲ್ಲಿ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ ಅವರು ಜೆ.ಡಿ.ಎಸ್. ಜೊತೆಗಿನ ಸುಧೀರ್ಘ ಒಡನಾಟವನ್ನು ಕಳಚಿಕೊಂಡು ಕಾಂಗ್ರೇಸ್ ಸೇರಲು ನಿರ್ಧರಿಸಿರುವುದು ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಕಡೂರು, ತರೀಕೆರೆ ಭಾಗದಲ್ಲಿ ಜೆ.ಡಿ.ಎಸ್ ಗೆ ಹಿನ್ನಡೆಯಾಗಿದೆ.

ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಕಾಂಗ್ರೇಸ್ ಟಿಕೆಟ್ ನೀಡುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ ಜೊತೆಗೆ ರಾಜ್ಯಮಟ್ಟದಲ್ಲಿ ಕಾಂಗ್ರೇಸ್ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ