October 5, 2024

ಕಾಫಿ ಕೃಷಿಯನ್ನು ವಾಣಿಜ್ಯ ಬೆಳೆ ಎಂದು ಪರಿಗಣಿಸಿ ಬೆಳೆಗಾರರ ಆಸ್ತಿಯನ್ನು ಮುಟ್ಟಗೋಲು ಹಾಕಿಕೊಳ್ಳುವುದನ್ನು ಕಾನೂನು ಬದ್ಧಗೊಳಿಸುವ ಸರ್ಫೇಸಿ ಕಾಯಿದೆ ರೈತ ವಿರೋಧಿಯಾಗಿದ್ದು ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಆಗ್ರಹಿಸಿದರು.

ಅವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಎಪಿಎಂಸಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಭತ್ತ, ರಾಗಿ, ಮೆಕ್ಕೆಜೋಳ ಇತ್ಯಾದಿ ಬೆಳೆಗಳಿಗೆ ಯಾವುದೇ ಶರತ್ತುಗಳನ್ನು ಹಾಕದೆ ಪೂರ್ಣ ಪ್ರಮಾಣದಲ್ಲಿ ರೈತರ ಉತ್ಪನ್ನಗಳನ್ನು ಖರೀದಿ ಪ್ರಾರಂಭ ಮಾಡಬೇಕು, ಕಾಫಿ, ಅಡಿಕೆ, ಕಾಳು ಮೆಣಸು ಇತ್ಯಾದಿ ಬೆಳೆಗಳು ವಿವಿಧ ರೋಗ ಭಾದೆಗಳಿಂದ ಹಾಗೂ ಅತಿವೃಷ್ಟಿಯಿಂದ ಆರ್ಥಿಕ ಸಂಕಷ್ಟಗೊಳಗಾಗಿದ್ದು ಸಾಲ ನೀಡಿದ ಸಂಸ್ಥೆ ರೈತ ಬೆಳೆಗಾರರ ಸಾಲ ವಸೂಲಾತಿ ನಿಲ್ಲಿಸಬೇಕು. ಅಡಕೆ ತೋಟಗಳಿಗೆ ಎಲೆ ಚುಕ್ಕಿ ರೋಗದಿಂದ ವ್ಯಾಪಕ ಹಾನಿಯಾಗಿದ್ದು ಸರ್ಕಾರ ಕ್ರಮ ಕೈಗೊಳ್ಳಬೇಕು. ಕಾಳು ಮೆಣಸು ಹಾಗೂ ಅಡಿಕೆ ಆಮದು ನೀತಿಯನ್ನು ರದ್ದು ಮಾಡಬೇಕು.

ಸರ್ಕಾರ ಪಹಣಿ ಶುಲ್ಕ ಹೆಚ್ಚಿಸಿರುವುದನ್ನು ತಕ್ಷಣದಿಂದಲೇ ಕಡಿತಗೊಳಿಸಬೇಕು, ರೈತರ ಹಾಗೂ ಗ್ರಾಮದ ಹಿತಾಸಕ್ತಿಯನ್ನು ಕಡೆಗಣಿಸಿ ಕಂದಾಯ ಜಮೀನುಗಳನ್ನು ಅರಣ್ಯ ಇಲಾಖೆಗೆ ವರ್ಗಾಯಿಸುವುದನ್ನು ನಿಲ್ಲಿಸಬೇಕು, ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಮತ್ತು ಜೀವ ಹಾನಿ ಉಂಟಾಗದಂತೆ ಕೇಂದ್ರ ಸರ್ಕಾರ ನೀತಿ ರೂಪಿಸಿ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಎಲ್ಲಾ ಜಿಲ್ಲೆಗಳ ಮತ್ತು ರಾಜ್ಯದ ರೈತರ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಾಗಿದೆ ಹಾಗೂ ರಾಜ್ಯದ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ತರಲು ಚಳುವಳಿ ರೂಪಿಸ ಬೇಕೆಂದು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳಾದ ಸಿದ್ದ ವೀರಪ್ಪ, ಅಬ್ಬನಿ ಶಿವಪ್ಪ, ಗಣೇಶ್, ಮಹೇಶ್, ದಯಾಕರ, ಅಮಿನ್ ಪಾಶ, ಬರ್ಮಣ್ಣ, ದುಗ್ಗಪ್ಪಗೌಡ, ನಾಗೇಶ್, ನಿರಂಜನ್ ಮೂರ್ತಿ, ವೃಷಭ ರಾಜ್, ತುಳಸೇಗೌಡ, ಸುರೇಶ್ ಭಟ್, ಸವಿಂಜಯ, ಎಸ್.ಪಿ ರಾಜು ಜಯಪಾಲ್ ಹಾಗೂ ಎಲ್ಲ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ