October 5, 2024

ಕಲೆಯ ಸಾಂಸ್ಕೃತಿಕ ಸಿರಿ ಹೊಂದಿರುವ ಚಿಕ್ಕಮಗಳೂರು ದೇವರು ಅತ್ಯಂತ ಹೆಚ್ಚು ಪ್ರೀತಿಸುವ ನೆಲೆಬೀಡು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.

ಚಿಕ್ಕಮಗಳೂರು ನಗರದ ಜಿಲ್ಲಾ ಆಟದ ಮೈದಾನದಲ್ಲಿ ನಿನ್ನೆ ಚಿಕ್ಕಮಗಳೂರು ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು. ಕಲೆ, ಸಾಹಿತ್ಯದ ತವರುರಾದ ಚಿಕ್ಕಮಗಳೂರಲ್ಲಿ ಪಂಚ ನದಿಗಳು ಹುಟ್ಟುತ್ತವೆ. ಶೃಂಗೇರಿಯಲ್ಲಿ ಶಾರದಾಂಬೆ, ಹೊರನಾಡು ತಾಯಿ ಅನ್ನಪೂರ್ಣೆ ನೆಲೆಸಿರುವ ನೆಲವೀಡು. ಇಂಥ ಪುಣ್ಯಭೂಮಿಯಲ್ಲಿ ಜೀವಿಸುವ ಪ್ರತಿಯೊಬ್ಬರು ಧನ್ಯರು ಎಂದರು.

ಕುವೆಂಪುರವರ ಹುಟ್ಟೂರು, ನಿಸರ್ಗ ಇರುವ ಕಡೆ ದೇವರು ನೆಲೆಸಿರುತ್ತಾರೆ. ನೀವೆಲ್ಲರೂ ಪುಣ್ಯವಂತರು. ಹೆಸರು ಚಿಕ್ಕದಾಗಿದ್ದರೂ ಇದರ ಖ್ಯಾತಿ ದೊಡ್ಡದಾಗಿದೆ. ಪಶ್ಚಿಮಘಟ್ಟ ಉಳಿಸಿಕೊಂಡು ಹೋಗಬೇಕೆಂದು ಕರೆ ನೀಡಿದರು.ಹೊಯ್ಸಳ ಸಾಮ್ರಾಜ್ಯ ಸ್ಥಾಪನೆಯಾಗಿರುವ ನಾಡು. ಕಲೆ, ಸಂಸ್ಕೃತಿ ಜಗತ್ ಪ್ರಸಿದ್ಧಿಯಾಗಿದೆ. ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿರುವ ನಾಗಲಾಂಬಿಕೆ ಚಿಕ್ಕಮಗಳೂರು ಜಿಲ್ಲೆಯವರು.

ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಹೆಲಿ ಟೂರಿಸಂಗಾಗಿ ಒಟ್ಟು 30 ಕೋಟಿ ರುಪಾಯಿ ಕೊಟ್ಟಿದ್ದೇನೆ. ಇಲ್ಲಿ ಏರ್ ಸ್ಟ್ರೀಪ್ ನಿರ್ಮಾಣಕ್ಕೆ 40 ಎಕರೆ ಭೂ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು, ಅದಕ್ಕೆ ಬೇಕಾದ ಹಣವನ್ನು ಮಂಜೂರು ಮಾಡುತ್ತೇನೆ. ಮುಂದಿನ ಚಿಕ್ಕಮಗಳೂರು ಹಬ್ಬದೊಳಗೆ ಈ ಕೆಲಸ ಪೂರ್ಣಗೊಳಿಸಬೇಕು ಎಂದರು.

ಸಿಎಂ ಆರೋಗ್ಯ ವಾಹಿನಿಯಡಿ ಚಿಕ್ಕಮಗಳೂರು ಜಿಲ್ಲೆಗೆ 11 ಕೋಟಿ ರುಪಾಯಿ ನೀಡಲಾಗಿದೆ, ಈ ಯೋಜನೆಯನ್ನು ಮುಂದಿನ ತಿಂಗಳು ಉದ್ಘಾಟನೆ ಮಾಡಲಾಗುವುದು, ಪ್ರತಿಯೊಂದು ಹೋಬಳಿ ಮಟ್ಟದಲ್ಲೂ ಈ ಸೇವೆ ಲಭ್ಯವಾಗಲಿದೆ ಎಂದರು.

ದೇಶದ ಪ್ರತಿಯೊಂದು ಮನೆಗೆ ನೀರು ಕೊಡುತ್ತೇನೆಂದು ಯಾವುದೇ ಪ್ರಧಾನಿ ಚಿಂತನೆ ಮಾಡಿರಲಿಲ್ಲ, ಧೈರ್ಯ ಮಾಡಿರಲಿಲ್ಲ, ಅದು, ಅಸಾಧ್ಯದ ಮಾತು ಆಗಿತ್ತು. 70 ವರ್ಷದಲ್ಲಿ ಆಗದೆ ಇರುವ ಕೆಲಸವನ್ನು ಪ್ರಧಾನಿ ನರೇಂದ್ರಮೋದಿಯವರು ಮಾಡಿದ್ದಾರೆ. ದೇಶದಲ್ಲಿ 10 ಕೋಟಿ ಮನೆಗಳಿಗೆ ಕುಡಿಯುವ ನೀರು ಕೊಟ್ಟಿದ್ದಾರೆ ಎಂದರು.

ಕಳೆದ 2 ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ 50ಲಕ್ಷ ಮನೆಗಳಿಗೆ ನೀರು ಕೊಟ್ಟಿದ್ದೇವೆ.ತರೀಕೆರೆ, ಕಡೂರು, ಚಿಕ್ಕಮಗಳೂರು ತಾಲೂಕುಗಳಲ್ಲಿ ಮನೆ ಮನೆಗೆ ಕುಡಿಯುವ ನೀರಿಗಾಗಿ 1400 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ ಎಂದರು.

ಅಂದ ಚೆಂದ ಸೊಬಗು, ಈ ಹಬ್ಬ ನೋಡಲು ಎರಡು ಕಣ್ಣು ಸಾಲೋದಿಲ್ಲ, ಸಿ.ಟಿ. ರವಿ ಕ್ರೀಯಾಶೀಲತೆ, ಸದಾ ಚಟುವಟಿಕೆಯಲ್ಲಿ ಸಾರ್ವಜನಿಕ ಜೀವನದಲ್ಲಿ ತೊಡಗಿ ಕೊಂಡಿದ್ದಾರೆ. ಎಲ್ಲರ ಮನಸ್ಸು ಜೋಡಿಸುವ ಕೆಲಸ ಮಾಡಿದ್ದಾರೆ ಎಂದರು.ಇಲ್ಲಿಗೆ ಬರಲು ಸಂತೋಷವಾಗುತ್ತದೆ, ಇಲ್ಲಿ ಹವಾ, ಶುದ್ಧವಾದ ವಾತಾವರಣ ಇದೆ. ಇಲ್ಲಿಗೆ ಬಂದರೆ ನಮ್ಮ ಆರೋಗ್ಯ ಖಂಡಿತ ಉತ್ತಮವಾಗುತ್ತದೆ. ದೇಹದಲ್ಲಿ ಹೊಸ ಶಕ್ತಿ ಬರುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಶಾಸಕ ಸಿ. ಟಿ ರವಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್,  ಇಂಧನ ಸಚಿವ ವಿ. ಸುನಿಲ್ ಕುಮಾರ್, ವಿಧಾಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಶಾಸಕರಾದ ಎಂ.ಪಿ. ಕುಮಾರಸ್ವಾಮಿ, ಡಿ.ಎಸ್. ಸುರೇಶ್, ಎಸ್.ಎಲ್. ಭೋಜೇಗೌಡ, ಡಾ. ಪುನೀತ್ ರಾಜ್ಕುಮಾರ್ ರವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವಾ, ರೋನಾಲ್ಡ್ ಕೊಲೋಸೋ, ಉದ್ಯಮಿ ಕಿಶೋರ್ಕುಮಾರ್ ಹೆಗ್ಡೆ, ಜಾನಪದ ಕೋಗಿಲೆ ಮುಗುಳಿ ಲಕ್ಷ್ಮೀದೇವಮ್ಮ, ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪಾ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.

ಇದಕ್ಕೂ ಮುನ್ನ ಉತ್ಸವದ ಅಂಗವಾಗಿ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ನೂರಕ್ಕೂ ಅಧಿಕ ಕಲಾ ತಂಡಗಳ ವೈಭವದೊಂದಿಗೆ ಅದ್ದೂರಿ ಆಕರ್ಷಕ ಮೆರವಣಿಗೆ ನಡೆಸಲಾಯಿತು. ಉದ್ಘಾಟನಾ ಕಾರ್ಯಕ್ರಮದ ನಂತರ ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ