October 5, 2024

ಬೆಂಗಳೂರು ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದನ್ನು ಭೇದಿಸಿರುವ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಶವವನ್ನು ಪತ್ತೆಹಚ್ಚಿದ್ದಾರೆ.

ಯಶವಂತಪುರ ಸಮೀಪದ ಮತ್ತಿಕೆರೆ ನಿವಾಸಿ ಗೋವಿಂದರಾಜು (19)ಕೊಲೆಯಾದ ವ್ಯಕ್ತಿ.

ಏನಿದು ಪ್ರಕರಣ?
ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸಿದ್ದ. ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್, ಭರತ್ ಮತ್ತಿತರ ಇಬ್ಬರು ಆರೋಪಿಗಳು ಕಳೆದ ಸೋಮವಾರ ಮತ್ತಿಕೆರೆಯಿಂದ ಗೋವಿಂದರಾಜನನ್ನು ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿದ್ದರು.

ಶವವನ್ನು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯಮಾರುತದ ಬಳಿ ವಾಹನದಲ್ಲಿ ತಂದು ಬಿಸಾಕಿದ್ದರು.

ಕುಟುಂಬದವರು ಗೋವಿಂದರಾಜು ಕಾಣೆಯಾಗಿರುವ ಬಗ್ಗೆ ಯಶವಂತಪುರ ಠಾಣೆಗೆ ದೂರು ನೀಡಿದ್ದರು.ಕುಟುಂಬದವರಿಗೆ ಅನಿಲ್ ಕುಮಾರ್ ಮೇಲೆ ಅನುಮಾನವಿದ್ದರಿಂದ ಪೊಲೀಸರು ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಭರತ್ ಮತ್ತಿತರ ಇಬ್ಬರು ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದರು.

ಇವತ್ತು ಆರೋಪಿಗಳನ್ನು ಚಾರ್ಮಾಡಿ ಘಾಟಿಗೆ ಕರೆ ತಂದು ಯಶವಂತಪುರ ಠಾಣೆಯ ಸಬ್ ಇನ್ ಸ್ಪೆಕ್ಟರ್ ಮಹೇಶ್ ಅವರ ತಂಡ ಸ್ಥಳೀಯ ಸಮಾಜ ಸೇವಕರ ಜತೆ ಸೇರಿ ಮೃತದೇಹವನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದರು.

ವರದಿ : ತನು ಕೊಟ್ಟಿಗೆಹಾರ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ