October 5, 2024

ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಅರಣ್ಯ ವಲಯದಲ್ಲಿ ಬೀಟೆ ಮರಗಳನ್ನು ಕಳ್ಳಸಾಗಾಣೆ ಮಾಡಿದ ಪ್ರಕರಣದಲ್ಲಿ ಅರಣ್ಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಆಲ್ದೂರು ಸಮೀಪದ ಅನಿಗನಹಳ್ಳಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿದ್ದ 4 ಬೆಲೆಬಾಳುವ ಬೀಟೆ ಮರಗಳನ್ನು ಕದ್ದು ಕೊಯ್ದು ಮಾರಾಟ ಮಾಡಿದ್ದ ಬಗ್ಗೆ ಆಲ್ದೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಸರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನಿಗನಹಳ್ಳಿಯಲ್ಲಿ ಬೀಟೆ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಸುಪ್ರೀತ್ ಅರೇನೂರು ಮತ್ತು ಅಬ್ದುಲ್ ಖಾದರ್ ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು.

ಬೀಟೆ ಮರಗಳ ಕಳ್ಳತನ ಪ್ರಕರಣದಲ್ಲಿ ಆಲ್ದೂರು ವಲಯ ಸಹಾಯಕ ವಲಯ ಅರಣ್ಯ ಅಧಿಕಾರಿ ದರ್ಶನ್ ಶಾಮೀಲಾಗಿರುವ ಬಗ್ಗೆ ದೂರುದಾರರು ಆರೋಪಿಸಿದ್ದರು ಮತ್ತು ಬಂಧಿತರು ಸಹ ದರ್ಶನ್ ಹೆಸರನ್ನು ಹೇಳಿದ್ದರು.

ಈ ಸಂಬಂಧ ದರ್ಶನ್ ಗೆ ಇಲಾಖೆ ಶೋಕಾಸ್ ನೋಟೀಸ್ ನೀಡಿತ್ತು. ಇದೀಗ ಆತನನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಮೂಡಿಗೆರೆ ಎ.ಸಿ.ಎಫ್. ಡಾ. ರಾಜೇಶ್ ನಾಯ್ಕ್ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಕೂಲಂಕುಶವಾಗಿ ವಿಚಾರಣೆ ನಡೆಯಬೇಕಾದರೆ ಅಧಿಕಾರಿ ಕರ್ತವ್ಯದಲ್ಲಿರುವುದು ಸೂಕ್ತವಲ್ಲ ಎಂದು ಮೇಲಾಧಿಕಾರಿಗಳಿಗೆ ತಿಳಿಸಿದ್ದೆವು. ಅದರಂತೆ ದರ್ಶನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರು ದರ್ಪಣ ಪತ್ರಿಕೆ ಈಗ್ಗೆ ಕೆಲ ದಿನಗಳ ಹಿಂದೆ ಈ ಪ್ರಕರಣದ ಬಗ್ಗೆ ವಿವರವಾದ ಸುದ್ದಿ ಪ್ರಕಟಿಸಿ ಅರಣ್ಯ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿತ್ತು.

ಅರಣ್ಯ ರಕ್ಷಣೆ ಮಾಡಬೇಕಾದ ಇಲಾಖೆಯ ಅಧಿಕಾರಿಯೇ ಮಾಫಿಯಾಗಳ ಜೊತೆ ಸೇರಿ ಅರಣ್ಯ ಭಕ್ಷಣೆಗೆ ಕುಮ್ಮಕ್ಕು ನೀಡಿರುವುದು ಅಕ್ಷಮ್ಯ ಅಪರಾಧ. ತಪ್ಪಿತಸ್ತ ಅಧಿಕಾರಿಯನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ