October 5, 2024

ಕಳಸ ನೂತನ ತಾಲ್ಲೂಕು ಎಂದು ಘೋಷಣೆ ಆದ ನಂತರ ಇದೇ ಪ್ರಥಮ ಬಾರಿಗೆ ಏರ್ಪಡಿಸಿದ್ದ ಕಳಸ ತಾಲ್ಲೂಕು ಉತ್ಸವ ಅತ್ಯಂತ ಸಂಭ್ರಮ ಸಡಗರದಿಂದ ನೆರವೇರಿತು.

ನಿನ್ನೆ ಮಂಗಳವಾರ ನಡೆದ ಒಂದು ದಿನದ ಕಳಸ ಉತ್ಸವದಲ್ಲಿ ಅನೇಕ ವೈವಿದ್ಯಮಯ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಲಾಗಿತ್ತು.
ಬೆಳಿಗ್ಗೆ 10 ರಿಂದ ರಾತ್ರಿ 11 ಗಂಟೆಯವರೆಗೆ ಸತತವಾಗಿ ಕಾರ್ಯಕ್ರಮಗಳ ಮೂಲಕ ಜನರು ಸಂಭ್ರಮಿಸಿದರು.

ಕಳಸ ಪಟ್ಟಣದಲ್ಲಿ ಆಕರ್ಷಕ ಸಾಂಸ್ಕøತಿಕ ಮೆರವಣಿಗೆ ನಡೆಸಲಾಯಿತು, ಕಲಾತಂಡಗಳು, ಸ್ತಬ್ಧಚಿತ್ರಗಳು ವಿಶೇಷವಾಗಿ ನೋಡುಗರನ್ನು ಆಕರ್ಷಿಸಿದವು.
ಕಳಸ ಕೆ.ಪಿ.ಎಸ್. ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮುಖ್ಯ ವೇದಿಕೆಯ ಕಾರ್ಯಕ್ರಮದಲ್ಲಿ ಹೊರನಾಡು ಕ್ಷೇತ್ರದ ಧರ್ಮಕರ್ತರಾದ ಶ್ರೀ ಜಿ. ಭೀಮೇಶ್ವರ ಜೋಷಿ, ಶಾಸಕ ಎಂ.ಪಿ. ಕುಮಾರಸ್ವಾಮಿ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಂಘಸಂಸ್ಥೆ ಮತ್ತು ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ಸ್ಥಳೀಯ ಕಲಾವಿದರ ಮತ್ತು ಮಂಗಳೂರಿನ ಹೆಜ್ಜೆನಾದ ಕಲಾ ತಂಡದವರಿಂದ ವೈಭವದ ಸಾಂಸ್ಕøತಿಕ ಪ್ರದರ್ಶನ ಏರ್ಪಡಿಸಲಾಗಿತ್ತು. ಕಳಸ ಮತ್ತು ಸುತ್ತಮುತ್ತಲ ಪ್ರದೇಶಗಳ ಸಾವಿರಾರು ಮಂದಿ ಉತ್ಸವದಲ್ಲಿ ಸಡಗರದಿಂದ ಭಾಗವಹಿಸಿ ಸುಂದರ ಕ್ಷಣಗಳನ್ನು ಕಣ್ತುಂಬಿಕೊಂಡರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ