October 5, 2024

ಕಳದಕ್ಷಿಣ ಕಾಶಿ ಕಳಸದಲ್ಲಿ ಫೆಬ್ರವರಿ 27 ಮತ್ತು 28 ರಂದು ಎರಡು ದಿನಗಳ ಕಾಲ ಕಳಸದಲ್ಲಿ 18ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ನೆರವೇರಿತು.

ಕಳಸ ಪಟ್ಟಣದ ಪ್ಲಾಂಟರ್ಸ್ ಕ್ಲಬ್ ಆವರಣದಲ್ಲಿ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮಗಳು ಜರುಗಿದವು.

ಜಿಲ್ಲೆಯ ಹಿರಿಯ ಜಾನಪದ ಸಾಹಿತಿ, ವಾಗ್ಮಿ ಚಟ್ನಳ್ಳಿ ಮಹೇಶ್ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.

ಸೋಮವಾರ ಬೆಳಿಗ್ಗೆ ಕಳಸ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಮ್ಮೇಳನಾಧ್ಯಕ್ಷರ ವೈಭವಪೂರ್ಣ ಸಾಂಸ್ಕøತಿಕ ಮೆರವಣಿಗೆ ನಡೆಯಿತು. ಕಳಶೇಸ್ವರ ದೇವಾಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಕಳಸ ಮುಖ್ಯ ಬೀದಿಗಳಲ್ಲಿ ಸಾಗಿ ಪ್ಲಾಂಟರ್ಸ್ ಕ್ಲಬ್ ಆವರಣಕ್ಕೆ ಬಂದಿತು.

ಮೆರವಣಿಗೆಯ ನಂತರ ಸಮ್ಮೇಳನ ಉದ್ಘಾಟನೆ ಸಮಾರಂಭ ನೆರವೇರಿತು. ಹೊರನಾಡು ಕ್ಷೇತ್ರದ ಧರ್ಮಕರ್ತರಾದ ಡಾ. ಜಿ. ಭೀಮೇಶ್ವರ ಜೋಷಿಯವರು ಸಮ್ಮೇಳನವನ್ನು ಉದ್ಘಾಟಿಸಿದರು. ಶಾಸಕರಾದ ಎಂ.ಪಿ. ಕುಮಾರಸ್ವಾಮಿಯವರು ಸಮ್ಮೇಳನ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ಸಮ್ಮೇಳನ ಅಧ್ಯಕ್ಷರಾದ ಚಟ್ನಳ್ಳಿ ಮಹೇಶ್ ಅವರು ತಮ್ಮ ಭಾಷಣದಲ್ಲಿ ಕನ್ನಡ ನಾಡು ನುಡಿಯ ಹಿರಿಮೆ ಗರಿಮೆ, ನಮ್ಮ ಜನಪದ ಸಂಸ್ಕøತಿ, ಜನಪದರ ಜ್ಞಾನ, ಕನ್ನಡ ಭಾಷೆಯ ಮುಂದಿರುವ ಸವಾಲುಗಳ ಬಗ್ಗೆ ಬೆಳಕು ಚೆಲ್ಲಿದರು.

ಉದ್ಘಾಟನೆಯ ನಂತರ ಎರಡು ದಿನಗಳ ಕಾಲ ವಿವಿಧ ಸಾಹಿತ್ಯ ಗೋಷ್ಠಿಗಳು, ಕವಿಗೋಷ್ಠಿ, ಬಹಿರಂಗ ಅಧಿವೇಶನ, ಸಾಂಸ್ಕøತಿಕ ಕಾರ್ಯಕ್ರಮಗಳು ನೆರವೇರಿದವು.

ಸಮ್ಮೇಳನದಲ್ಲಿ ಸಾಹಿತ್ಯ ಸಿರಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಗೌರವ ಸಮರ್ಪಣೆ, ಪುಸ್ತಕಗಳ ಬಿಡುಗಡೆ, ಪುಸ್ತಕ ಪ್ರದರ್ಶನ ಮತ್ತು ಮಾರಾಟ ಹೀಗೆ ವೈವಿದ್ಯಮಯ ವಿಚಾರಗಳನ್ನು ಅಳವಡಿಸಕೊಳ್ಳಲಾಗಿತ್ತು.

ಸಮ್ಮೇಳನದ ಊಟ ಉಪಚಾರ ಅಚ್ಚುಕಟ್ಟಾಗಿ ನಡೆಯಿತು. ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರ ದೇವಾಲಯದ ವತಿಯಿಂದ ಊಟ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಸಮಾರೋಪ ಸಮಾರಂಭದಲ್ಲಿ ವಿಧಾನಪರಿಷತ್ ಉಪಸಭಾಪತಿಗಳಾದ ಎಂ.ಕೆ. ಪ್ರಾಣೇಶ್ ಅವರು, ಮೂಡಬಿದ್ರೆ ಆಳ್ವಾಸ್ ವಿದ್ಯಾಸಂಸ್ಥೆಯ ಮೋಹನ್ ಆಳ್ವ, ಸಾಹಿತಿ ನರೇಂದ್ರ ರೈ ದೇರ್ಲ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಸಮಯದ ಅಭಾವ ಒತ್ತಡದಲ್ಲಿ ನಡೆದ ಗೋಷ್ಠಿಗಳು

ಜಿಲ್ಲಾ ಸಮ್ಮೇಳನದಲ್ಲಿ ಗೋಷ್ಠಿಗಳ ಸಂಖ್ಯೆ ಹೆಚ್ಚಾಗಿದ್ದು ಎಲ್ಲಾ ಗೋಷ್ಠಿಗಳು ಒತ್ತಡದಲ್ಲಿ ನಡೆದದ್ದು ಕಂಡುಬಂತು.

ಗೋಷ್ಠಿಗಳಲ್ಲಿ ತಮ್ಮ ವಿಚಾರ ಮಂಡನೆಗೆ ನೂರಾರು ಕಿಲೋಮೀಟರ್ ದೂರದಿಂದ ಬಂದಿದ್ದ ಸಂಪನ್ಮೂಲ ವ್ಯಕ್ತಿಗಳು ಸಮಯದ ಅಭಾವದಿಂದ ಚುಟುಕಾಗಿ ತಮ್ಮ ಮಾತು ಮುಗಿಸುವಂತಾಯಿತು.

ಉದ್ಘಾಟನಾ ಮತ್ತು ಸಮಾರೋಪ ಸಮಾರಂಗಳು ಬಹಳ ಸುದೀರ್ಘವಾಗಿದ್ದು ಕಂಡು ಬಂತು.

ಮುಂದಿನ ಸಮ್ಮೇಳನಗಳಲ್ಲಿ ಗೋಷ್ಠಿಗಳ ಸಂಖ್ಯೆಯನ್ನು ಮಿತಿಗೊಳಿಸಿದರೆ ಒಳ್ಳೆಯದು ಎಂಬ ಮಾತುಗಳು ಜನರಿಂದ ಕೇಳಿಬರುತ್ತಿದ್ದವು.

ಒಟ್ಟಾರೆಯಾಗಿ ಕಳಸದಲ್ಲಿ ನಡೆದ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವ್ಯವಸ್ಥಿತ ಪೂರ್ವತಯಾರಿ, ಜನಾಕರ್ಷಣೆಯಿಂದ ಯಶಸ್ವಿಯಾಗಿ ವಿಜೃಂಭಣೆಯಿಂದ ನೆರವೇರಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ, ಕಳಸ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕಳಸದ ಎಲ್ಲಾ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಎಲ್ಲರೂ ಒಟ್ಟಾಗಿ ಸಮ್ಮೇಳನವನ್ನು ಯಶಸ್ವಿಯಾಗಿ ಸಂಯೋಜನೆ ಮಾಡಿದ್ದರು.

ನಿರಂತರ ಸುದ್ದಿಗಳಿಗಾಗಿ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ
https://chat.whatsapp.com/DDXjmfQaBa0HJQqmKf7y89

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ