October 5, 2024

ಕಾಫಿತೋಟದಲ್ಲಿ ಮರಗಸಿ ಮಾಡುವಾಗಿ ಆಯಾ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕು ಗೋಣಿಬೀಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಗೋಣಿಬೀಡು ಹೊಸಳ್ಳಿ ಗ್ರಾಮದ ಗಣೇಶ್ ಪೂಜಾರಿ(40 ವರ್ಷ) ಮರದಿಂದ ಬಿದ್ದು ಮೃತಪಟ್ಟಿರುತ್ತಾರೆ.

ಮೂಡಿಗೆರೆ ಪಟ್ಟಣಪಂಚಾಯಿತಿ ಮಾಜಿ ಸದಸ್ಯ ಕೆ.ಟಿ. ಶ್ರೀಧರ್ ಅವರ ಗೋಣಿಬೀಡು ತೋಟದಲ್ಲಿ  ಈ ಘಟನೆ ನಡೆದಿದೆ.

ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಮರಗಸಿ ಮಾಡಲು ಮರವೇರಿದ್ದ ಗಣೇಶ್ ಪೂಜಾರಿ ಆಯಾತಪ್ಪಿ ಕೆಳಗೆ ಬಿದ್ದಿದ್ದು ಅವರ ತೆಲೆ ಭಾಗಕ್ಕೆ ಪೆಟ್ಟಾಗಿತ್ತು ಎಂದು ತಿಳಿದುಬಂದಿದೆ. ತೀವ್ರ ಗಾಯಗೊಂಡಿದ್ದ ಅವರನ್ನು ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಂಬುಲೆನ್ಸ್ ಮೂಲಕ ಮಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು. ಉಜಿರೆ ಸಮೀಪ ಹೋಗುವಾಗ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಗಣೇಶ್ ಪೂಜಾರಿ ಗೋಣಿಬೀಡು ಸಮೀಪದ ಜಿ.ಹೊಸಳ್ಳಿ ಗ್ರಾಮದವರಾಗಿದ್ದು ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.

ತೋಟದ ಮಾಲೀಕರಾದ ಕೆ.ಟಿ.ಶ್ರೀಧರ್ ಅವರು ಕಾರ್ಮಿಕರ ಸಾವಿನ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿ  ಮೃತ ಗಣೇಶ್ ಪೂಜಾರಿ ಅವರ ಕುಟುಂಬಕ್ಕೆ  ಸೂಕ್ತ ವಿಮಾ ಪರಿಹಾರ ದೊರಕಿಸಿಕೊಡಲಾಗುವುದು ಎಂದಿದ್ದಾರೆ.

ಮರದಿಂದ ಬಿದ್ದು ಕಾರ್ಮಿಕರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಈಗ್ಗೆ 15 ದಿನಗಳ ಹಿಂದೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯಲ್ಲಿ ತಮಿಳುನಾಡು ಮೂಲದ ಕಾರ್ಮಿಕನೋರ್ವ ಮರದಿಂದ ಬಿದ್ದು ಮೃತಪಟ್ಟಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ