October 5, 2024

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಪಕ್ಷದ ವತಿಯಿಂದ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮೂಡಿಗೆರೆ ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಯ ಗೃಹಿಣಿಗೆ ತಿಂಗಳಿಗೆ ರೂ.2000-00 ಹಣ, ಪ್ರತಿಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ. ಉಚಿತ ಅಕ್ಕಿ ನೀಡುವುದಾಗಿ ಘೋಷಣೆ ಮಾಡಿದೆ. ಅದನ್ನು ಗ್ಯಾರಂಟಿ ಕಾರ್ಡ್ ಮೂಲಕ ಮನೆಮನೆಗೆ ತಲುಪಿಸುತ್ತಿದ್ದು ಗ್ಯಾರಂಟಿ ಕಾರ್ಡಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಹಿ ಹಾಕಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮತದಾರರು ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸುವ ಮೂಲಕ ರಾಜ್ಯದ ಜನರು ನೆಮ್ಮದಿಯ ದಿನಗಳನ್ನು ಮತ್ತೆ ಮರಳಿ ಪಡೆಯುವುದಕ್ಕೆ ಕಾರಣವಾಗಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವ ಕಾಂಗ್ರೇಸ್ ಮುಖಂಡ ನಿಶಾಂತ್ ಪಟೇಲ್ ಸತ್ತಿಗನಹಳ್ಳಿ ಮಾತನಾಡಿ ರಾಜ್ಯ ಮತ್ತು ಕೇಂದ್ರದಲ್ಲಿ ಬಿ.ಜೆ.ಪಿ. ಸರ್ಕಾರಗಳು ಬಂದ ನಂತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ, ಸಾಮಾನ್ಯ ಜನರ ನಿತ್ಯದ ಬದುಕು ಕಷ್ಟದಾಯಕವಾಗಿದೆ. ಯುವಜನರು ಉದ್ಯೋಗವಿಲ್ಲದೇ ನಿರುದ್ಯೋಗ ಸಮಸ್ಯೆ ಮಿತಿಮೀರಿದೆ. ಸರ್ಕಾರಿ ಸ್ವಾಮ್ಯದ ಅನೇಕ ಸಂಸ್ಥೆಗಳು ಬಾಗಿಲು ಮುಚ್ಚಿವೆ. ಬಿ.ಜೆ.ಪಿ. ದುರಾಡಳಿದಿಂದ ಜನ ಬೇಸತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬದಲಾವಣೆ ಬಯಸಿದ್ದಾರೆ. ಮೂಡಿಗೆರೆ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ನಿಶ್ಚಯವಾಗಿ ಜಯಸಾಧಿಸುತ್ತದೆ. ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಗೋಣಿಬೀಡು ಹೋಬಳಿ ಕಾಂಗ್ರೇಸ್ ಅಧ್ಯಕ್ಷ ಮಹೇಶ್ ಅಗ್ರಹಾರ, ಮುಂಖಡರಾದ ವಿಜಯಕುಮಾರ್, ಎಂ.ಎಸ್. ಅನಂತ್, ಮರಗುಂದ ಪ್ರಸನ್ನ, ಸಂಪತ್ ಬಿಳಗುಳ, ಎಂ.ಎಲ್. ಅಭಿಜಿತ್, ಸಂಪತ್ ಮುಗ್ರಹಳ್ಳಿ, ರಾಮಚಂದ್ರ ಒಡೆಯಾರ್, ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಗಳಾದ ಎಂ.ಸಿ. ಹೂವಪ್ಪ, ಶ್ರೀರಂಗಯ್ಯ, ಪ್ರಭಾಕರ್ ಬಿನ್ನಡಿ ಮುಂತಾದವರು ಉಪಸ್ಥಿತರಿದ್ದರು, ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೇಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ