October 5, 2024

ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ. ಮಾನಹಾನಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುಜರಾತ್ ನ ಸೂರತ್ ನ್ಯಾಯಾಲಯ ನೀಡಿದ ತೀರ್ಪಿನ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ತಮ್ಮ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಮೋದಿ ಎನ್ನುವ ಉಪನಾಮೆಯ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಒಂದು ಹೇಳಿಕೆಯ ವಿರುದ್ಧ ಗುಜರಾತ್ ರಾಜ್ಯದ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿಯೆಂದು ತೀರ್ಪು ಪ್ರಕಟಿಸಿ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

 

ಈ ತೀರ್ಪಿನ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಕಛೇರಿಯಿಂದ ಆದೇಶ ಹೊರಡಿಸಲಾಗಿದೆ. ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಯಾವುದೇ ಜನಪ್ರತಿನಿಧಿ ನ್ಯಾಯಾಲಯವೊಂದರಿಂದ 2 ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆಗೆ ಗುರಿಯಾದರೆ ಅಂತಹ ಜನಪ್ರತಿನಿಧಿಯ ಸದಸ್ಯತ್ವ ಕಾನೂನು ಪ್ರಕಾರ ರದ್ದಾಗಲಿದೆ. ಇದೀಗ ರಾಹುಲ್ ಗಾಂಧಿ ನ್ಯಾಯಾಲಯದಿಂದ 2 ವರ್ಷ ಶಿಕ್ಷೆಗೆ ಗುರಿಯಾಗಿರುವುದರಿಂದ ಅವರ ಸದಸ್ಯತ್ವವನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

ಏನಿದು ಪ್ರಕರಣ ?

2019ರಲ್ಲಿ ಕೋಲಾರದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಾ ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಹೀಗೆ ಕಳ್ಳರೆಲ್ಲರ ಹೆಸರಿನಲ್ಲಿ ಮೋದಿ ಸೇರಿಕೊಂಡಿರುತ್ತದಲ್ಲಾ ಎಂದು ಪ್ರಧಾನಿ ನರೇದ್ರ ಮೋದಿಯವರನ್ನು ಕುರಿತು ವ್ಯಂಗ್ಯವಾಡಿದ್ದರು. ಈ ಭಾಷಣವನ್ನು ಕಾಂಗ್ರೇಸ್ ಮುಖಂಡ ಬಿ.ಎಲ್. ಶಂಕರ್ ಅವರು ಕನ್ನಡಕ್ಕೆ ತುರ್ಜುಮೆ ಮಾಡಿದ್ದರು.
ಈ ಹೇಳಿಕೆಯ ವಿರುದ್ಧ ಗುಜರಾತ್ ಬಿ.ಜೆ.ಪಿ. ಶಾಸಕರೊಬ್ಬರು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ ಸೆಷನ್ಸ್ ನ್ಯಾಯಾಲಯ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ತೀರ್ಪು ನೀಡಿತ್ತು.

ಮುಂದೇನು ?

ಸದ್ಯಕ್ಕೆ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ. ಒಂದು ವೇಳೆ ಅವರು ಸೂರತ್ ನ್ಯಾಯಾಲಯದ ವಿರುದ್ಧ ಮೇಲಿನ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಿ ಅಲ್ಲಿ ಜೈಲು ಶಿಕ್ಷೆಗೆ ತೀರ್ಪಿಗೆ ತಡೆ ನೀಡಿದರೆ ಆಗ ಅವರ ಸಂಸತ್ ಸದಸ್ಯತ್ವದ ಅನರ್ಹತೆ ರದ್ದುಗೊಂಡು ಪುರ್ನ ಸದಸ್ಯರಾಗಿ ಮುಂದುವರಿಯುವ ಅವಕಾಶವಿದೆ.
ಒಂದು ವೇಳೆ ಉನ್ನತ ನ್ಯಾಯಾಲಯಗಳಲ್ಲಿ ಈಗಿನ ತೀರ್ಪನ್ನು ಎತ್ತಿಹಿಡಿದರೆ ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವ ರದ್ದಾಗಲಿದ್ದು ಜೊತೆಗೆ ಮುಂದಿನ ಆರು ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸಲು ಸಹ ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಇದರೊಂದಿಗೆ ಕಾಂಗ್ರೇಸ್ ಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಹಿನ್ನಡೆಯಾಗಿದೆ. ಇತ್ತೀಚೆಗೆ ತಾನೆ ಭಾರತ್ ಜೋಡೋ ಯಾತ್ರೆ ಮೂಲಕ ದೇಶದಾದ್ಯಂತ ಕಾಂಗ್ರೇಸ್ ಪಕ್ಷಕ್ಕೆ ಪುನಶ್ಚೇತನ ನೀಡುವ ಕಾರ್ಯಮಾಡಿದ್ದ ರಾಹುಲ್ ಗಾಂಧಿ ಇದೀಗ ತಮ್ಮ ಸಂಸತ್ ಸದಸ್ಯತ್ವವನ್ನೇ ಕ¼ದುಕೊಳ್ಳುವಂತಹ ಸ್ಥಿತಿ ನಿರ್ಮಾಣ ಮಾಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ