October 5, 2024

ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಕೃಷಿಮೇಳದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಕೃಷಿ ಪ್ರಶಸ್ತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಹೆಚ್.ಕೆ. ಪೂರ್ಣೇಶ್ ರವರಿಗೆ ಪ್ರಧಾನ ಮಾಡಲಾಯಿತು.

ಪೂರ್ಣೇಶ್ ಅವರು ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಸಮೀಪದ ಜಿ.ಹೊಸಳ್ಳಿ ಗ್ರಾಮದವರು. ಇವರು ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿಯನ್ನು ಕೈಗೊಂಡಿರುತ್ತಾರೆ. ಭತ್ತ, ಕಾಫಿ, ಅಡಿಕೆ, ಕಾಳುಮೆಣಸು, ವಿವಿಧ ಜಾತಿಯ ಹಣ್ಣಿನ ಮರಗಳನ್ನು ಬೆಳೆಸಿದ್ದಾರೆ.

ಹೈನುಗಾರಿಕೆ, ಮೀನುಸಾಕಾಣಿಕೆಯನ್ನು ಉಪಕಸುಬಾಗಿ ಆಳವಡಿಸಿಕೊಂಡಿರುತ್ತಾರೆ. ತಮ್ಮ ಜಮೀನಿನಲ್ಲಿ ಇವರು ಸಾವಯವ ಕೃಷಿಗೆ ಹೆಚ್ಚಿನ ಮಹತ್ವ ನೀಡಿರುತ್ತಾರೆ. ಎರೆಹುಳು ಗೊಬ್ಬರ ಮತ್ತು ಕಾಂಪೋಸ್ಟ್ ಗೊಬ್ಬರವನ್ನು ತಯಾರಿಸಿ ಅದನ್ನು ತಮ್ಮ ಜಮೀನಿಗೆ ನೀಡುತ್ತಿದ್ದಾರೆ. ಗೋವುಗಳಿಗೆ ತಮ್ಮ ಜಮೀನಿನಲ್ಲಿಯೆ ರಸಮೇವನ್ನು ಬೆಳೆದು ನೀಡುತ್ತಿದ್ದಾರೆ.

ಕೃಷಿಯಲ್ಲಿ ಅಪಾರ ಆಸಕ್ತಿಯಿಂದ ತೊಡಗಿಸಿಕೊಂಡಿರುವ ಪೂರ್ಣೇಶ್ ಸರ್ಕಾರದ ವಿವಿಧ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಸುತ್ತಮುತ್ತಲಿನ ರೈತಾಪಿವರ್ಗದವರಿಗೂ ಉತ್ತಮ ಸಲಹೆ ಮಾರ್ಗದರ್ಶನ ನೀಡುತ್ತಿದ್ದಾರೆ. ತಮ್ಮ ಮುಖಂಡತ್ವದಲ್ಲಿ ಶ್ರೀ ಭೈರವೇಶ್ವರ ರೈತ ಒಕ್ಕೂಟ ಸ್ಥಾಪಿಸಿ ಅದರ ಅಧ್ಯಕ್ಷರಾಗಿದ್ದಾರೆ. ರೈತ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಜಂಟಿ ಅರಣ್ಯ ಸಮಿತಿ ಅಧ್ಯಕ್ಷರಾಗಿರುತ್ತಾರೆ. ಕೃಷಿ ಇಲಾಖೆ ಮತ್ತು ಕಾಫಿ ಮಂಡಳಿಯಲ್ಲಿ ರೈತರ ಪರವಾಗಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪೂರ್ಣೇಶ್ ಅವರ ಕೃಷಿ ಕ್ಷೇತ್ರದ ಸಾಧನೆಗೆ ಈಗಾಗಲೇ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಹಲವು ಪ್ರಶಸ್ತಿಗಳು ಅರಸಿ ಬಂದಿವೆ. ಇದೀಗ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕೃಷಿ ಮೇಳದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರತಿನಿಧಿಯಾಗಿ ಪೂರ್ಣೇಶ್ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ