October 5, 2024

ಮೂಡಿಗೆರೆ ತಾಲ್ಲೂಕಿನ ಚಿಕ್ಕಹಳ್ಳ ರಸ್ತೆಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು ಇದರಿಂದ ಈ ಭಾಗದ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗಿದೆ.

ಈ ರಸ್ತೆ ಪ್ರಮುಖ ರಸ್ತೆಯಾಗಿದ್ದು ಪ್ರತಿದಿನ ಇಲ್ಲಿ ನೂರಾರು ವಾಹನಗಳು ಓಡಾಟ ನಡೆಸುತ್ತವೆ. ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವ ಕಾರ್ಮಿಕರು ಮತ್ತು ತಮ್ಮ ದಿನನಿತ್ಯದ ವ್ಯವಹಾರಕ್ಕೆ ಈ ರಸ್ತೆಯಲ್ಲಿ ಸಾಗುವ ಜನರಿಗೆ ಬಹಳ ತೊಂದರೆಯಾಗಿದೆ.

ಈ ರಸ್ತೆ ಮೂಡಿಗೆರೆ ಮತ್ತು ಗುಲ್ಲನ್ ಪೇಟೆ ನಡುವೆ ಸಂಪರ್ಕ ರಸ್ತೆಯಾಗಿದೆ. ಅನೇಕ ಗ್ರಾಮಗಳಿಗೆ ಈ ರಸ್ತೆ ಪ್ರಮುಖ ಸಂಪರ್ಕ ಸೇತುವಾಗಿದೆ.

ಈ ರಸ್ತೆಯಲ್ಲಿ ಬರುವ ಹೊಳೆಗೆ ಈ ಹಿಂದೆ ಇದ್ದ ಸೇತುವೆ ಶಿಥಿಲಗೊಂಡಿದ್ದರಿಂದ ಇದೀಗ ನೂತನ ಸೇತುವೆ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.

ಕಳೆದ ಎರಡೂವರೆ ತಿಂಗಳ ಹಿಂದೆ ಸೇತುವೆಯ ಕೆಲಸ ಪ್ರಾರಂಭವಾಗಿದೆ. ಆದರೆ ಕಾಮಗಾರಿ ಬಹಳ ನಿಧಾನಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ವಿಳಂಬವಾಗಿರುವುದರಿಂದ ಸೇತುವೆ ಸದ್ಯಕ್ಕೆ ಪೂರ್ಣಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದಾಗಿ ಈ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.

ಈ ಬಗ್ಗೆ ಸಾರ್ವಜನಿಕರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಸಂಬಂಧಿಸಿದ ಗುತ್ತಿಗೆದಾರರು ಮತ್ತು ಇಂಜಿನಿಯರ್ ಗಳು ಈ ಬಗ್ಗೆ ಮುತುವರ್ಜಿ ವಹಿಸಿ ಆದಷ್ಟು ಬೇಗ ಸೇತುವೆ ಕೆಲಸ ಪೂರ್ಣಗೊಳಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದೆ ಹೋದರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ