October 5, 2024

ಮೂಡಿಗೆರೆ ಕ್ಷೇತ್ರದ ಕುಮಾರಸ್ವಾಮಿ ಬೆಂಬಲಿತ ಬಿ.ಜೆ.ಪಿ. ಮುಖಂಡರು ಮತ್ತು ಕಾರ್ಯಕರ್ತರು ಇಂದು ದೊಡ್ಡ ಸಂಖ್ಯೆಯಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿಯವರ ಮನೆಗೆ ತೆರಳಿ ಮೂಡಿಗೆರೆ ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿರುವ ಸಿ.ಟಿ.ರವಿಯವರ ಮನೆಗೆ ತೆರಳಿದ ಕಾರ್ಯಕರ್ತರು ಎಂ.ಪಿ. ಕುಮಾರಸ್ವಾಮಿಯವರ ಪರವಾಗಿ ಘೋಷಣೆಗಳನ್ನು ಕೂಗಿ ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡಬೇಕು ಎಂದು ಸಿ.ಟಿ.ರವಿಯವರ ಎದುರು ತಮ್ಮ ಹಕ್ಕೋತ್ತಾಯ ಮಂಡಿಸಿದರು.

ತಮ್ಮ ಮನೆಗೆ ಆಗಮಿಸಿದ್ದ ಬಿ.ಜೆ.ಪಿ. ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿ.ಟಿ.ರವಿಯವರು ಪಕ್ಷ ಎಲ್ಲವನ್ನು ಅಳೆದು ತೂಗಿ ನಿರ್ಧಾರ ಕೈಗೊಳ್ಳುತ್ತದೆ. ಪಕ್ಷದ ವತಿಯಿಂದ ಈಗಾಗಲೇ ಸರ್ವೇಗಳನ್ನು ನಡೆಸಲಾಗಿದೆ. ಎಲ್ಲರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದಿಂದ ಯಾರಿಗೇ ಟಿಕೆಟ್ ನೀಡಿದರು ತಾವೆಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಮೊನ್ನೆ ಬಂದಿದ್ದ ಕಾರ್ಯಕರ್ತರಿಗೂ ಇದನ್ನೇ ಹೇಳಿ ಕಳುಹಿಸಿದ್ದೇನೆ. ಹಾಗಾಗಿ ಪಕ್ಷದ ಗೆಲುವಿಗೆ ಎಲ್ಲರೂ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಇಂದು ಸಿ.ಟಿ.ರವಿಯವರ ಮನೆಗೆ ತೆರಳಿದ್ದವರಲ್ಲಿ ಬಿ.ಜೆ.ಪಿ. ಮುಖಂಡರುಗಳಾದ ಕೆಂಜಿಗೆ ಕೇಶವ್, ವೆಂಕಟಸುಬ್ಬಯ್ಯ, ಅರೆಕುಡಿಗೆ ಶಿವು, ವಿಕ್ರಂಗೌಡ ಬಣಕಲ್, ಹೆಮ್ಮಕ್ಕಿ ಗಿರೀಶ್ ಸೇರಿದಂತೆ ಅನೇಕ ಮುಖಂಡರು ಮತ್ತು ದೊಡ್ಡ ಸಂಖ್ಯೆಯ ಕಾರ್ಯಕರ್ತರು ಇದ್ದರು.

ಕೊನೆಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿಯವರು ಸಹ ಸಿ.ಟಿ.ರವಿಯವರ ಮನೆಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದರು.

ಕಳೆದ ವಾರ ಕುಮಾರಸ್ವಾಮಿಯವರ ವಿರೋಧಿ ಬಣದ ಬಿ.ಜೆ.ಪಿ. ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸಿ.ಟಿ.ರವಿಯವರ ಮನೆಗೆ ಬಂದಿದ್ದರು. ಇಂದು ಕುಮಾರಸ್ವಾಮಿಯವರ ಬೆಂಬಲಿತ ಬಣದ ಬಿ.ಜೆ.ಪಿ. ಕಾರ್ಯಕರ್ತರು ತಮ್ಮ ಅಹವಾಲು ಸಲ್ಲಿಸಿದ್ದಾರೆ. ಮೂಡಿಗೆರೆ ಕ್ಷೇತ್ರದಲ್ಲಿ ಬಿ.ಜೆ.ಪಿ. ಒಡೆದ ಮನೆಯಂತಾಗಿದ್ದು ಕಾರ್ಯಕರ್ತರು ಮತ್ತು ಮುಖಂಡರು ಸ್ಪಷ್ಟವಾದ ಎರಡು ಗುಂಪುಗಳಾಗಿ ವಿಂಗಡಣೆಯಾಗಿದ್ದಾರೆ. ಒಂದಷ್ಟು ಕಾರ್ಯಕರ್ತರು ಈ ಬಣ ರಾಜಕೀಯದಿಂದ ಕ್ಷೇತ್ರದಲ್ಲಿ ಪಕ್ಷಕ್ಕೆ ಒದಗಿರುವ ಸ್ಥಿತಿಯನ್ನು ಕಂಡು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ