October 5, 2024

ಹಿರಿಯ ರಾಜಕೀಯ ಮುಖಂಡ ರಾಜ್ಯ ಗೃಹಮಂಡಳಿ ಮಾಜಿ ಅಧ್ಯಕ್ಷ ಜಿ.ಹೆಚ್. ಹಾಲಪ್ಪಗೌಡ ಬಿ.ಜೆ.ಪಿ. ತೊರೆದು ಕಾಂಗ್ರೇಸ್ ಪಕ್ಷ ಸೇರಿದ್ದಾರೆ.

ನಿನ್ನೆ ಬೆಂಗಳೂರಿನ ಕೆ.ಪಿ.ಸಿ.ಸಿ. ಕಛೇರಿಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಶ್ರೀಮತಿ ಮೋಟಮ್ಮ ಮುಂತಾದ ಹಿರಿಯ ನಾಯಕರ ಸಮ್ಮುಖದಲ್ಲಿ ಹಾಲಪ್ಪಗೌಡರು ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಗೊಂಡರು.

ಕಳೆದ ಕೆಲ ವರ್ಷಗಳಿಂದ ಬಿ.ಜೆ.ಪಿ.ಯಲ್ಲಿ ಗುರುತಿಸಿಕೊಂಡಿದ್ದ ಹಾಲಪ್ಪಗೌಡರು ಇದೀಗ ಮರಳಿ ತಮ್ಮ ಮಾತೃಪಕ್ಷ ಸೇರ್ಪಡೆಗೊಂಡಿದ್ದಾರೆ.

ಅನೇಕ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿರುವ ಹಾಲಪ್ಪಗೌಡರು ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದವರು. ಮೂಡಿಗೆರೆ ಕ್ಷೇತ್ರದಲ್ಲಿ ತನ್ನದೆ ಆದ ಬೆಂಬಲಿಗರ ಬಳಗವನ್ನು ಹೊಂದಿದ್ದಾರೆ. ಗ್ರಾಮಪಂಚಾಯಿತಿ ಮಟ್ಟದಿಂದ ರಾಜ್ಯ ಗೃಹಮಂಡಳಿ ಅಧ್ಯಕ್ಷ ಸ್ಥಾನದ ವರೆಗೆ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ನಂದೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ, ಮೂಡಿಗೆರೆ ಕಸಬಾ ಹೋಬಳಿ ಕಾಂಗ್ರೇಸ್ ಅಧ್ಯಕ್ಷರಾಗಿ, ರಾಜ್ಯ ಉಗ್ರಾಣ ನಿಗಮದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.  ಕೆ.ಪಿ.ಸಿ.ಸಿ. ಕಾರ್ಯದರ್ಶಿಯಾಗಿ ಮಂಡ್ಯ ಮತ್ತು ದ.ಕ. ಜಿಲ್ಲೆಯ ಉಸ್ತುವಾರಿ ನಿಭಾಯಿಸಿದ್ದರು.

ಎಸ್.ಎಂ. ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಗೃಹಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿರುವ ಹಾಲಪ್ಪಗೌಡರು ಎಸ್.ಎ. ಕೃಷ್ಣ ಅವರು ಕಾಂಗ್ರೇಸ್ ತೊರೆದು ಬಿ.ಜೆ.ಪಿ. ಸೇರ್ಪಡೆಗೊಂಡಿದ್ದಾಗ ಅವರೊಂದಿಗೆ ತಾವೂ ಬಿ.ಜೆ.ಪಿ. ಸೇರಿದ್ದರು.

ಇದೀಗ ಮರಳಿ ಕಾಂಗ್ರೇಸ್ ಸೇರ್ಪಡೆಗೊಂಡಿರುವ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಹಾಲಪ್ಪಗೌಡರು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಮುಂತಾದವರ ಒತ್ತಾಸೆಯ ಮೇರೆಗೆ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೇಸ್ ಪಕ್ಷವನ್ನು ಮರಳಿ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೇಸ್ ಪರವಾಗಿ ಜನಾಭಿಪ್ರಾಯ ವ್ಯಕ್ತವಾಗುತ್ತಿದೆ. ಮೂಡಿಗೆರೆ ಕ್ಷೇತ್ರದಲ್ಲಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ