October 5, 2024

ರಾಜ್ಯದಲ್ಲಿ ಮೂರು ಪಕ್ಷಗಳ ದುರಾಡಳಿತದಿಂದ ಬೇಸತ್ತು ಜನ ಬದಲಾವಣೆ ಬಯಸುತ್ತಿದ್ದಾರೆ. ಹಾಗಾಗಿ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ಬಿಎಸ್‍ಪಿ ಪಕ್ಷದ ಕಡೆಗೆ ಜನರು ಒಲವು ತೋರುತ್ತಿದ್ದಾರೆಂದು ಬಿಎಸ್‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಹೇಳಿದರು.

ಶುಕ್ರವಾರ ಮೂಡಿಗೆರೆ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನವರು 50 ವರ್ಷ ನಡೆಸಿದ ದುರಾಡಳಿತದಿಂದ ಜನ ಬೇಸತ್ತು ಬಿಜೆಪಿಗೆ ಅಧಿಕಾರ ಕೊಟ್ಟರು. ಬಿಜೆಪಿಯವರು ತಾವೇನು ಕಡಿಮೆಯಿಲ್ಲವೆಂದು ಭ್ರಷ್ಟಾಚಾರದಲ್ಲಿ ಕಾಂಗ್ರೇಸ್ ಪಕ್ಷವನ್ನು ಮೀರಿಸಿದ್ದಾರೆ. ಶೇ.40 ಕಮಿಷನ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಬೇಸತ್ತು ಹೋಗಿದ್ದಾರೆ. ಶ್ರೀಮಂತವಾಗಿದ್ದ ದೇಶವನ್ನು ಬಡತನಕ್ಕೆ ತಂದು ನಿಲ್ಲಿಸಿದ್ದಾರೆ. ಹಾಗಾಗಿ ಜನ ಬದಲಾವಣೆ ಬಯಸಿದ್ದಾರೆ.

ಹಿಂದಿನಿಂದಲೂ ಜನಪರವಾಗಿ ಹೋರಾಟ ಮಾಡಿಕೊಂಡು ಮನೆ ಮಾತಾಗಿದ್ದ ಬಿಎಸ್ಪಿ ಪಕ್ಷದ ಅಭ್ಯರ್ಥಿ ಲೋಕವಳ್ಳಿ ರಮೇಶ್ ಅವರಿಗೆ ಜನ ಒಂದು ಅವಕಾಶ ಕೊಡಬೇಕೆಂದು ಮನವಿ ಮಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಮೊದಲ ಪಟ್ಟಿಯಲ್ಲಿ 53 ಅಭ್ಯರ್ಥಿಗಳ ಆಯ್ಕೆ ನಡೆದಿದೆ. 2ನೇ ಪಟ್ಟಿ ಸಧ್ಯದಲ್ಲೇ ಬಿಡುಗಡೆಯಾಗಲಿದ್ದು, ರಾಜ್ಯ ಎಲ್ಲಾ ಕ್ಷೇತ್ರದಲ್ಲಿ ಬಿಎಸ್‍ಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆಂದು ಹೇಳಿದರು.

ಬಿಎಸ್‍ಪಿ ಅಭ್ಯರ್ಥಿ ಲೋಕವಳ್ಳಿ ರಮೇಶ್ ಮಾತನಾಡಿ, ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಈ ಹಿಂದೆ ಆಯ್ಕೆಯಾಗಿದ್ದ ಶಾಸಕರು ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಆದರೆ ಇಲ್ಲಿನ ಸಮಸ್ಯೆ ಬಗೆಹರಿಸಲು ಇಂದಿಗೂ ಸಾಧ್ಯವಾಗಿಲ್ಲ. ನಮ್ಮ ಪಕ್ಷ ಎಲ್ಲಾ ವರ್ಗದ ಬಡ ಜನರಿಗೆ ಸಮಾನವಾದ ಹಕ್ಕು ಪಡೆಯಲು ಸಂವಿಧಾನವೇ ಪ್ರಣಾಳಿಕೆ ಮಾಡಿಕೊಂಡು ಚುನಾವಣೆ ಎದುರಿಸಲಾಗುತ್ತಿದೆ. ತಾನು 2 ಬಾರಿ ಗ್ರಾ.ಪಂ. ಸದಸ್ಯನಾಗಿ, ಹಲವಾರು ಸಂಘ ಸಂಶ್ಥೆಯಲ್ಲಿ ಗುರುತಿಸಿಕೊಳ್ಳುವ ಮೂಲಕ ಅನೇಕ ಜನಪರವಾದ ಹೋರಾಟದಲ್ಲಿ ಪಾಲ್ಗೊಂಡು ಜನರ ಸಮಸ್ಯೆ ನಿವಾರಿಸುವ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಬಾರಿ ಕ್ಷೇತ್ರದ ಜನರು ತನ್ನನ್ನು ಬೆಂಬಲಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್‍ಪಿ ಮುಖಂಡರಾದ ಪಿ.ಕೆ.ಮಂಜುನಾಥ್, ಶಂಕರ್ ಬೆಟ್ಟಗೆರೆ, ಹಾಂದಿ ಬಾಬಣ್ಣ, ಮಹೇಶ್, ವಸಂತಕುಮಾರ್, ಹೊನ್ನೇಶ್, ಕುಮಾರ್‍ಬೆಟ್ಟಗೆರೆ, ಬಕ್ಕಿ ಮಂಜು, ಮಂಜು ಹೊರಟಿ ಮುಂತಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ