October 5, 2024

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿ ಎನ್.ಎಂ. ಹರ್ಷಕುಮಾರ್ (55ವರ್ಷ) ನಿಧನ ಹೊಂದಿದ್ದಾರೆ. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹರ್ಷ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳಸ ಪಟ್ಟಣ ನಿವಾಸಿಯಾಗಿದ್ದ ಹರ್ಷಕುಮಾರ್ ಅವರು ಕಳಸ ತಾಲ್ಲೂಕಿನ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಮುಂಚೂಣಿ ಮುಖಂಡರಾಗಿದ್ದರು. ಅನೇಕ ವರ್ಷಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ರಾಜಕೀಯವಾಗಿ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಯುವ ಕಾಂಗ್ರೇಸ್ ಅಧ್ಯಕ್ಷರಾಗಿ, ಕಳಸ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿಯಾಗಿ.. ಹೀಗೆ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು.

ಕಳಸ ಗ್ರಾಮ ಪಂಚಾಯಿತಿ ಸದಸ್ಯರಾಗಿ ಮೂರು ಅವಧಿಗೆ ಆಯ್ಕೆಯಾಗಿದ್ದರು, ಇವರ ತಂದೆ ಮೃತ್ಯುಂಜಯ ಅವರು ಕಳಸೇಶ್ವರ ದೇವಸ್ಥಾನದ ಶಾನುಭೋಗರಾಗಿದ್ದರು. ಹರ್ಷ ಅವರು ಸಹ ಕಳಸೇಶ್ವರ ದೇವಾಲಯದ ಧರ್ಮದರ್ಶಿ ಮಂಡಳಿ ಅಧ್ಯಕ್ಷರಾಗಿದ್ದರು. ಕಳಸ ಯುವಕ ಸಂಘವನ್ನು ಸ್ಥಾಪನೆ ಮಾಡಿ ಅದರ ಅಧ್ಯಕ್ಷರಾಗಿ ಯುವಕರಿಗೆ ಸ್ಪೂರ್ತಿದಾಯಕರಾಗಿದ್ದರು. ಅನೇಕ ಯುವಕರು ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಲು ಪ್ರೇರಣೆಯಾಗಿದ್ದರು. ಕಳಸ ರೋಟರಿ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಹರ್ಷ ಅವರು ಕಳಸದ ಎಲ್ಲಾ ಸಾರ್ವಜನಿಕ, ಧಾರ್ಮಿಕ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರೋತ್ಸಾಹ ನೀಡುತ್ತಿದ್ದರು. ಸರಳವಾದ ನಡೆ ನುಡಿಯಿಂದ ಉತ್ತಮ ಸ್ನೇಹಜೀವಿಯಾಗಿ ಜನಮನ್ನಣೆ, ಪ್ರೀತಿವಿಶ್ವಾಸ ಗಳಿಸಿದ್ದರು.

ಮೃತರು ತಾಯಿ, ಪತ್ನಿ, ಇಬ್ಬರು ಹೆಣ್ಣುಮಕ್ಕಳು, ಅಪಾರ ಬಂಧುಗಳು, ಸ್ನೇಹ ವಲಯವನ್ನು ಅಗಲಿದ್ದಾರೆ.

ಅಕಾಲಿಕವಾಗಿ ಅಗಲಿದ ಹರ್ಷಕುಮಾರ್ ಅವರ ನಿಧನಕ್ಕೆ ಕಾಂಗ್ರೇಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ, ಸಂಘಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು, ಕಳಸ ತಾಲ್ಲೂಕಿನ ಜನತೆ ತೀವ್ರ ಸಂತಾಪ ಸೂಚಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ