October 5, 2024

ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀಮತಿ ಎನ್.ಆರ್. ನಾಗರತ್ನ ಬಿ.ಜೆ.ಪಿ. ಸೇರ್ಪಡೆಯಾಗಿದ್ದಾರೆ. ನಾಗರತ್ನ ಇತ್ತೀಚೆಗಷ್ಟೇ ಕಾಂಗ್ರೇಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದರು.

ನಿನ್ನೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಬಿ.ಜೆ.ಪಿ. ಸಮಾವೇಶದಲ್ಲಿ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಬಿ.ಜೆ.ಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ನಾಗರತ್ನ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಎನ್.ಆರ್. ನಾಗರತ್ನ ಅವರು ಅನೇಕ ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಪಕ್ಷದ ಜಿಲ್ಲಾ ಮಟ್ಟದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಬಣಕಲ್ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದರು. ನಾಗರತ್ನ ಅವರು ಮೂಡಿಗೆರೆಯಲ್ಲಿ ನವರತ್ನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯನ್ನು ಹುಟ್ಟುಹಾಕಿ ಆ ಮೂಲಕ ಮಹಿಳೆಯರಿಗೆ ಹೊಲಿಗೆ ತರಬೇತಿ ಸೇರಿದಂತೆ ಸ್ವ ಉದ್ಯೋಗದ ಬಗ್ಗೆ ಉಚಿತ ತರಬೇತಿಗಳನ್ನು ನೀಡುತ್ತಿದ್ದಾರೆ.

ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿ ಒಂದು ಲಕ್ಷ ಠೇವಣಿಯೊಂದಿಗೆ ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದರು. ತಿಂಗಳ ಹಿಂದೆ ಅವರು ಕಾಂಗ್ರೇಸ್ ಪಕ್ಷಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ನಾಗರತ್ನ ಅವರು ಮೂಡಿಗೆರೆ ಕಾಂಗ್ರೇಸ್ ಪಕ್ಷದಲ್ಲಿ ಮಹಿಳೆಯರಿಗೆ ಯಾವುದೇ ಪ್ರೋತ್ಸಾಹ ಇಲ್ಲ. ನಾನು ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮ ವಹಿಸಿದ್ದೇನೆ. ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಕಾಂಗ್ರೇಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇದೀಗ ಬಿ.ಜೆ.ಪಿ. ಸೇರಿದ್ದೇನೆ.

ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿ.ಜೆ.ಪಿ. ರಾಷ್ಟ್ರದ ಅಭಿವೃದ್ಧಿಗೆ ಉತ್ತಮ ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರುತ್ತಿದೆ. ಮೂಡಿಗೆರೆ ಕ್ಷೇತ್ರದಲ್ಲಿ ಅಭ್ಯರ್ಥಿ ಪರವಾಗಿ ನಾನು ಮತ್ತು ನನ್ನ ಬೆಂಬಲಿಗರು ಕೆಲಸ ಮಾಡಿ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ