October 5, 2024

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೇಸ್ ವಕ್ತಾರರಾಗಿದ್ದ, ನಗರಸಭೆ ಮಾಜಿ ಸದಸ್ಯ ಹೆಚ್.ಎಸ್. ಪುಟ್ಟಸ್ವಾಮಿ ಹಿರೇಮಗಳೂರು ಇವರು ಕಾಂಗ್ರೇಸ್ ಪಕ್ಷವನ್ನು ತೊರೆದು ಬಿ.ಜೆ.ಪಿ. ಪಕ್ಷವನ್ನು ಸೇರಿದ್ದಾರೆ.

ನಿನ್ನೆ ಕಡೂರಿನಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿ.ಜೆ.ಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರ ಸಮ್ಮುಖದಲ್ಲಿ ಪುಟ್ಟಸ್ವಾಮಿ  ಬಿ.ಜೆ.ಪಿ. ಸೇರ್ಪಡೆಯಾದರು.

ಜಿಲ್ಲಾ ಕಾಂಗ್ರೇಸ್ ಪ್ರಮುಖ ಪದಾಧಿಕಾರಿಯಾಗಿ ಕಳೆದ ಅನೇಕ ವರ್ಷಗಳಿಂದ ಪಕ್ಷದ ಕಾರ್ಯಚಟುವಟಿಕೆಗಳನ್ನು ಸಂಘಟಿಸುವಲ್ಲಿ ಮತ್ತು ಪಕ್ಷದ ಮುಖವಾಣಿಯಾಗಿ ಕೆಲಸ ಮಾಡಿದ್ದ ಹಿರೇಮಗಳೂರು ಪುಟ್ಟಸ್ವಾಮಿಯವರು ಕಾಂಗ್ರೇಸ್ ತೊರೆದಿರುವುದು ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ.

ಈ ಹಿಂದೆ ವಿಜಯಕರ್ನಾಟಕ ದಿನಪತ್ರಿಕೆ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಟ್ಟಸ್ವಾಮಿಯವರು ನಂತರ ಕಾಂಗ್ರೇಸ್ ಪಕ್ಷವನ್ನು ಸೇರಿ ಪಕ್ಷದ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಒಂದು ಅವಧಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಪಕ್ಷದ ಜಿಲ್ಲಾ ವಕ್ತಾರರಾಗಿದ್ದರು. ಕಳೆದ ಅವಧಿಯಲ್ಲಿ ಚಿಕ್ಕಮಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಪುಟ್ಟಸ್ವಾಮಿಯವರು ಕಾಂಗ್ರೇಸ್ ಪಕ್ಷದಲ್ಲಿ ಇತ್ತೀಚೆಗೆ ವಲಸೆ ಬಂದ ಹೆಚ್.ಡಿ.ತಮ್ಮಯ್ಯ ಅವರಿಗೆ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ, ಪಕ್ಷದಲ್ಲಿ ಸಂಘಟನೆ ಮಾಡುವವರಿಗೆ ಪ್ರೋತ್ಸಾಹ ಸಿಗದೇ ಪ್ರಾಮಾಣಿಕರನ್ನು ಮೂಲೆಗುಂಪು ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು ಇದನ್ನು ವಿರೋಧಿಸಿ ನಾನು ಕಾಂಗ್ರೇಸ್ ಪಕ್ಷವನ್ನು ತೊರೆದಿದ್ದೇನೆ ಎಂದಿದ್ದಾರೆ.

ಹಿರೇಮಗಳೂರು ಪುಟ್ಟಸ್ವಾಮಿ ಚಿಕ್ಕಮಗಳೂರು, ಮೂಡಿಗೆರೆ, ಕಡೂರು ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಇವರ ಸೇರ್ಪಡೆಯಿಂದ ಖುಷಿಯಾಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಗಳಿಗೆ ಪುಟ್ಟಸ್ವಾಮಿಯವರನ್ನು ಪರಿಚಯಿಸುತ್ತಾ ಇವರ ಸೇರ್ಪಡೆಯಿಂದ ನಮಗೆ ಆನೆ ಬಲ ಬಂದಂತಾಗಿದೆ ಎಂದು ಅಭಿಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ👇
https://chat.whatsapp.com/DDXjmfQaBa0HJQqmKf7y89

ಈ ಸರ್ತಿ ನೀವೆಲ್ಲಾ ಸೇರಿ ಕಾಂಗ್ರೇಸ್ ಗೆ ಓಟ್ ಹಾಕ್ಬೇಕು : ಜೆ.ಡಿ.ಎಸ್. ನ ಎಸ್.ಎಲ್. ಬೋಜೇಗೌಡರ ವಿಡಿಯೋ ವೈರಲ್

ನಾಮಪತ್ರ ಹಿಂಪಡೆದ ಬಿ.ಬಿ. ನಿಂಗಯ್ಯ; ಮೂಡಿಗೆರೆ ಕ್ಷೇತ್ರದಲ್ಲಿ ಒಂಬತ್ತು ಮಂದಿ ಕಣದಲ್ಲಿ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ