October 5, 2024

ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದೆ. ಬಹಿರಂಗ ಪ್ರಚಾರಕ್ಕೆ ಮೂರ್ನಾಲ್ಕು ದಿನ ಬಾಕಿ ಇರುವಂತೆ ಪ್ರಚಾರದ ಭರಾಟೆ ಹೆಚ್ಚಾಗುತ್ತಿದೆ. ಒಂದೆಡೆ ಕಾರ್ಯಕರ್ತರು ಮನೆಮನೆ ಪ್ರಚಾರದಲ್ಲಿ ತೊಡಗಿದ್ದರೆ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಬಹಿರಂಗ ಸಭೆ, ರೋಡ್ ಶೋ ಮೂಲಕ ಜನರನ್ನು ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ.

ನಾಳೆ ಮೂಡಿಗೆರೆಯಲ್ಲಿ ಜೆ.ಡಿ.ಎಸ್. ಅಭ್ಯರ್ಥಿ ಎಂ.ಪಿ. ಕುಮಾರಸ್ವಾಮಿ ಪರವಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರಚಾರ ನಡೆಸಲಿದ್ದಾರೆ. ಮೂಡಿಗೆರೆ ಕೋರ್ಟ್ ಎದುರು ಇರುವ ರಾಜೀವ್ ಕ್ರೀಡಾಂಗಣದಲ್ಲಿ ದೇವೇಗೌಡರು ಬಹಿರಂಗ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಭೆಗೆ ಜೆ.ಡಿ.ಎಸ್. ಭರ್ಜರಿ ತಯಾರಿ ಮತ್ತು ಪ್ರಚಾರ ನಡೆಸುತ್ತಿದ್ದ ತನ್ನ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ.

*****************

ಇತ್ತ ಕಾಂಗ್ರೇಸ್ ಅಭ್ಯರ್ಥಿ ನಯನ ಮೋಟಮ್ಮ ಪರವಾಗಿ ಪ್ರಚಾರ ನಡೆಸಲು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸುತ್ತಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ನಾಳೆ ಸಂಜೆ 4 ಗಂಟೆಗೆ ಹೊಯ್ಸಳ ಕ್ರೀಡಾಂಗಣದಲ್ಲಿ ಕಾಂಗ್ರೇಸ್ ಪಕ್ಷ ಆಯೋಜಿಸಿರುವ ಬಹಿರಂಗ ಚುನಾವಣಾ ಸಭೆಯಲ್ಲಿ ಪ್ರಚಾರ ಭಾಷಣದಲ್ಲಿ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಭಾಗವಹಿಸಲಿದ್ದಾರೆ.

ಕಾಂಗ್ರೇಸ್ ಪಕ್ಷ ಡಿ.ಕೆ. ಶಿವಕುಮಾರ್ ಸಭೆಯ ಮೂಲಕ ತನ್ನ ಶಕ್ತಿಪ್ರದರ್ಶನ ಮಾಡಲು ತಯಾರಿ ನಡೆಸುತ್ತಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ