October 5, 2024

ಇಂದು ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ. ನೇತೃತ್ವದ ಸರ್ಕಾರಗಳು ಕೇವಲ ಬಂಡವಾಳಶಾಹಿ ಉದ್ಯಮಿಗಳ ಹಿತವನ್ನು ಮಾತ್ರ ಕಾಯುತ್ತಿದೆ. ದೇಶದ ಸಾಮಾನ್ಯ ಜನರ ಬದುಕಿಗೆ ಪೂರಕವಾದ ಯಾವುದೇ ಯೋಜನೆಗಳನ್ನು, ಚಿಂತನೆಗಳನ್ನು ಮಾಡುತ್ತಿಲ್ಲ. ಭ್ರಷ್ಟಾಚಾರದ ಮೂಲಕ ರಾಜಕೀಯ ನಾಯಕರು ಅಭಿವೃದ್ಧಿ ಹೊಂದುತ್ತಿದ್ದಾರೆಯೇ ಹೊರತು ಸಮಾಜದ ಉದ್ದಾರ ಆಗುತ್ತಿಲ್ಲ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಸಿ.ಪಿ.ಐ. ಪಕ್ಷ ಕೋಮುವಾದಿ ಭ್ರಷ್ಟ ಬಿ.ಜೆ.ಪಿ. ಪಕ್ಷದ ವಿರುದ್ಧ ಸದಾ ಧ್ವನಿ ಎತ್ತುತ್ತಾ ಬಂದಿದೆ ಎಂದು ಸಿ.ಪಿ.ಐ. ರಾಷ್ಟ್ರೀಯ ಮಂಡಳಿ ಸದಸ್ಯ, ಕೇರಳದ ರಾಜ್ಯಸಭಾ ಸದಸ್ಯ ಸಂತೋಷ್‍ಕುಮಾರ್ ಹೇಳಿದರು.

ಅವರು ಶುಕ್ರವಾರ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಸಿ.ಪಿ.ಐ. ಅಭ್ಯರ್ಥಿಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಬಿಜೆಪಿಯವರು ಹಿಂದೂ ಧರ್ಮದ ಮುಖವಾಡ ಇಟ್ಟುಕೊಂಡು ರಾಜಕಾರಣ ಮಾಡಿ ಈ ದೇಶದ ಸಂಪತ್ತನ್ನು ಲೂಟಿಕೋರರಿಗೆ ಮಾರಾಟ ಮಾಡುತ್ತಿದ್ದಾರೆ. ಈಗಾಗಲೇ ನಮ್ಮ ಕೈಯಲ್ಲಿದ್ದ ನವರತ್ನಗಳನ್ನು ಖಾಸಗೀಕರಣ ಮಾಡಿ ಆಗಿದೆ. ಈಗ ರಾಜ್ಯದಲ್ಲಿ ಹೇರಳವಾಗಿರುವ ಸಂಪತ್ತನ್ನು ಬಂಡವಾಳ ಶಾಹಿಗಳಿಗೆ ಮಾರಾಟ ಮಾಡಲು ಹೊರಟಿದ್ದಾರೆ. ಅದಕ್ಕಾಗಿಯೇ ಮೋದಿ ತಂಡ ರಾಜ್ಯದಲ್ಲಿ ಬೀಡುಬಿಟ್ಟಿದೆ. ಈ ಬಾರಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಕ್ಷಿಣ ಭಾರತದ ಅರಣ್ಯ, ನೈಸರ್ಗಿಕ ಸಂಪನ್ಮೂಲ ಉಳಿಯುವುದಿಲ್ಲ. ಹಾಗಾಗಿ ದೇಶದ ಸಂಪತ್ತು ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲಾ ಭಾರತೀಯರ ಕರ್ತವ್ಯವಾಗಿದೆ. ಮೂಡಿಗೆರೆ ಕ್ಷೇತ್ರದ ಸಿ.ಪಿ.ಐ. ಅಭ್ಯರ್ಥಿ ರಮೇಶ್ ಕೆಳಗೂರು ಅವರನ್ನು ಬೆಂಬಲಿಸುವ ಮೂಲಕ ಕ್ಷೇತ್ರದ ರೈತರು, ಕಾರ್ಮಿಕರು ಮತ್ತು ಶೋಷಿತರ ಪರವಾಗಿ ವಿಧಾನಮಂಡಲದಲ್ಲಿ ಧ್ವನಿ ಎತ್ತಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಮಾತನಾಡಿ, ಮೋದಿ ಅವರು ಡಬಲ್ ಎಂಜಿನ್ ಸರಕಾರ ಇದ್ದರೆ ವೇಗವಾಗಿ ಅಭಿವೃದ್ಧಿ ಆಗುತ್ತದೆ ಎಂದು ಹೇಳುತ್ತಿರುವ ಅಂಶವನ್ನು ಜನರು ಗಮನಿಸಲೇಬೇಕು. ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ವೇಗವಾಗಿ ಡಬಲ್ ಅಲ್ಲ ತ್ರಿಬಲ್ ಆಗಿದೆ. ಅಲ್ಲದೇ ಹಿಂದಿನ ಸರ್ಕಾರಗಳ ಕಾಲದಲ್ಲಿ ಶೇ.20ರಷ್ಟು ಇದ್ದ ಕಮಿಷನ್ ಈಗ ಶೇ.40 ಕ್ಕೆ ವೇಗವಾಗಿ ಬೆಳೆದಿದೆ. ಹಾಗಾಗಿ ಬಿಜೆಪಿಯನ್ನು ಬೇರು ಸಮೇತ ಕಿತ್ತೊಗೆಯದಿದ್ದರೆ ಜನ ಸಾಮಾನ್ಯರ ಬದುಕು ಮೂರಾಬುಟ್ಟೆಯಾಗುವುದಂತೂ ಸತ್ಯ. ಮೂಡಿಗೆರೆ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ರಮೇಶ್ ಕೆಳಗೂರು ಸ್ಪರ್ಧಿಸಿದ್ದು, ಜನರ ಸಂಕಷ್ಟ ನಿವಾರಿಸಲು ಜನತೆ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಸಿಪಿಐ ರಾಜ್ಯ ಮುಖಂಡ ಡಾ.ಸಿದ್ದಣ್ಣಗೌಡ ಪಾಟೀಲ್, ಪಿ.ವಿ.ಲೋಕೇಶ್, ರಾಧಾ ಸುಂದರೇಶ್, ಬಿ.ಕೆ.ಲಕ್ಷ್ಮಣ್‍ಕುಮಾರ್, ಬಿ. ಅಮ್ಜದ್, ಗುಣಶೇಖರ್, ಎ.ಜ್ಯೋತಿ, ಸಿಪಿಐ ಅಭ್ಯರ್ಥಿ ರಮೇಶ್ ಕೆಳಗೂರು ಮುಂತಾದವರು ಉಪಸ್ಥಿತರಿದ್ದರು.

ಇದಕ್ಕು ಮೊದಲು ಮೂಡಿಗೆರೆ ಪಟ್ಟಣದಲ್ಲಿ ಸಿ.ಪಿ.ಐ. ಕಾರ್ಯಕರ್ತರ ಬೃಹತ್ ಮೆರವಣಿಗೆ ಏರ್ಪಡಿಸಲಾಗಿತ್ತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ