October 5, 2024

ಪಿ.ಎಂ.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಂದಿನ ದಿನಗಳಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆರ್ಥಿಕ ನೆರವು ವರ್ಗಾವಣೆಯಾಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಎಲ್ಲಾ ರೈತರು ತಪ್ಪದೆ ಇ-ಕೆವೈಸಿ ಯನ್ನು ಮಾಡಿಸಬೇಕು. ಇ-ಕೆವೈಸಿ ಮಾಡಿಸದಿದ್ದರೆ ಮುಂದಿನ ಯಾವುದೇ ಆರ್ಥಿಕ ಸೌಲಭ್ಯ ಸಿಗುವುದಿಲ್ಲ. ಹಾಗಾಗಿ ರೈತರು ಇ-ಕೆವೈಸಿಯನ್ನು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಓಟಿಪಿ ಆಧಾರಿತ ಅಥವಾ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇ-ಕೆವೈಸಿಯನ್ನು ಮಾಡಿಸಲು ಆಧಾರ್ ಕಾರ್ಡ್, ಆಧಾರ್ ಕಾರ್ಡ್‍ಗೆ ಜೋಡಣೆಯಾಗಿರುವ ಮೋಬೈಲ್ ಸಂಖ್ಯೆ, ಆಧಾರ್ ಕಾರ್ಡ್‍ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ ಇಲ್ಲದಿರುವ ರೈತರು ಹೆಬ್ಬೆಟ್ಟಿನ ಅಚ್ಚು ಕೊಡುವುದರ ಮೂಲಕ ಇ-ಕೆವೈಸಿಯನ್ನು ಮಾಡಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.

ಬಹುತೇಕರು ಈಗಾಗಲೇ ಇ-ಕೆವೈಸಿ ಮಾಡಿಸಿದ್ದು, pm kissan samman nidhi   ವೆಬ್ ಸೈಟ್ ಗೆ ಭೇಟಿ ನೀಡಿ E-KYC   ಮೇಲೆ ಕ್ಲಿಕ್ ಮಾಡಿ ಅಲ್ಲಿ ತಮ್ಮ ಆಧಾರ್ ನಂಬರ್ ನಮೂದಿಸಿದರೆ ಇ-ಕೆವೈಸಿ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿಯಬಹುದು.

ಒಂದು ವೇಳೆ ಇ-ಕೆವೈಸಿ ಆಗದೇ ಇದ್ದರೆ ತಮ್ಮ ಆಧಾರ್ ನಂಬರ್ ಗೆ ನೀಡಿದ ಪೋನ್ ನಂಬರ್ ಈಗಲೂ ಚಾಲ್ತಿಯಲ್ಲಿದ್ದರೆ ಓಟಿಪಿ ಆಧಾರದಲ್ಲಿ ರೈತರು ಸ್ವಯಂ ತಾವೇ ತಮ್ಮ ಮೊಬೈಲ್ ಮೂಲಕ ಇ-ಕೆವೈಸಿ ಮಾಡಬಹುದಾಗಿದೆ. ಸಾಧ್ಯವಾಗದೇ ಇದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ