October 5, 2024

ಕರ್ನಾಟಕ ರಾಜ್ಯ ವಿಧಾನಸಭಾ ನೂತನ ಅಧ್ಯಕ್ಷ(ಸಭಾಪತಿ)ರಾಗಿ ಮಂಗಳೂರು ಶಾಸಕ ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೇಸ್ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಮೊನ್ನೆ ಸೋಮವಾರದಿಂದ ಆರಂಭವಾಗಿದ್ದು ಹಂಗಾಮಿ ಅಧ್ಯಕ್ಷರಾಗಿ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಕಾರ್ಯನಿರ್ವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಶಾಸಕರ ಪ್ರಮಾಣವಚನ ನೆರವೇರಿಸಲಾಗಿತ್ತು.

ಇಂದು ಸದನದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನೆರವೇರಿತು. ಕಾಂಗ್ರೇಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದ ಯು.ಟಿ. ಖಾದರ್ ವಿಧಾನಸಭಾ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಭಾಪತಿ ಸ್ಥಾನಕ್ಕೆ ಯು.ಟಿ.ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ಸದನವು ಅವರ ಆಯ್ಕೆಯನ್ನು ಸರ್ವಾನುಮತದಿಂದ ಅನುಮೋದಿಸಿತು.

ಮಂಗಳೂರು ಕ್ಷೇತ್ರದ ಶಾಸಕರಾಗಿ ಸತತ ನಾಲ್ಕನೇ ಬಾರಿ ಆಯ್ಕೆಯಾಗಿರುವ ಯು.ಟಿ. ಖಾದರ್ ಅವರು ಈ ಬಾರಿ ಸಚಿವಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಅವರನ್ನು ಸಭಾಪತಿ ಸ್ಥಾನಕ್ಕೆ ಮನವೊಲಿಸಿ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಯು.ಟಿ. ಖಾದರ್ ಅವರ ತಂದೆ ಯು.ಟಿ. ಫರೀದ್ ಅವರು ಸಹ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಯು.ಟಿ. ಖಾದರ್ ಅವರು 2013ರಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಆರೋಗ್ಯ, ವಸತಿ, ನಗರಾಭಿವೃದ್ಧಿ, ಜಲಸಂಪನ್ಮೂಲದಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು.

ಕಾನೂನು ಪದವೀದರರಾದ ಯು.ಟಿ.ಖಾದರ್ ಸರ್ವಜನಾಂಗದ ಸಮನ್ವಯತೆಗೆ ಉತ್ತಮ ಉದಾಹರಣೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಸೌಹಾರ್ದತೆಯನ್ನು ಕಾಪಾಡಿಕೊಂಡು ಬರುವಲ್ಲಿ ಸದಾ ಸಮಚಿತ್ತತೆಯಿಂದ ಹೇಳಿಕೆ ನೀಡುತ್ತಾ ಖಾದರ್ ಎಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾಗಿದ್ದಾರೆ. ಅವರು ವಿಧಾನಸಭೆಯ ಅಧ್ಯಕ್ಷರಾಗುವ ಮೂಲಕ ಸದನವನ್ನು ಸಮತೋಲನದಲ್ಲಿ ಕೊಂಡೊಯ್ಯುವ ಸಾಮಥ್ರ್ಯವನ್ನು ಪ್ರದರ್ಶಿಸಲು ಒಂದು ಉತ್ತಮ ಅವಕಾಶವನ್ನು ಪಡೆದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ