October 5, 2024

ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್. ಸೋಲು ಕಂಡಿರುವ ಹಿನ್ನಲೆಯಲ್ಲಿ ನೈತಿಕ ಹೊಣೆಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿ.ಎಂ. ಇಬ್ರಾಹಿಂ ಪ್ರಕಟಿಸಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚುನಾವಣೆ ಫಲಿತಾಂಶ ಬಂದ ಮರುದಿನ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ಕಾಂಗ್ರೇಸ್ ಪಕ್ಷದಲ್ಲಿದ್ದ ಸಿ.ಎಂ. ಇಬ್ರಾಹಿಂ ಜೆ.ಡಿ.ಎಸ್. ಪಕ್ಷ ಸೇರಲು ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೇಸ್ ನಿಂದ ಹೊರಬಂದಿದ್ದರು. ಜೆ.ಡಿ.ಎಸ್. ವರಿಷ್ಠರು ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯನ್ನು ನೀಡಿ ರಾಜ್ಯದಲ್ಲಿ ಅಲ್ಪಸಂಖ್ಯಾತ ಮತಗಳನ್ನು ಸೆಳೆಯುವ ಪ್ರಯತ್ನ ನಡೆಸಿದ್ದರು.

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದ ಸಿ.ಎಂ. ಇಬ್ರಾಹಿಂ ಜೆ.ಡಿ.ಎಸ್. ಪಕ್ಷ ಅಧಿಕಾರದ ಗದ್ದುಗೆ ಹಿಡಿಯುತ್ತದೆ ಎಂದು ಭರವಸೆಯ ಭಾಷಣಗಳನ್ನು ಮಾಡಿದ್ದರು. ಆದರೆ ರಾಜ್ಯದಲ್ಲಿ ಕಾಂಗ್ರೇಸ್ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಜೆ.ಡಿ.ಎಸ್. ಕೇವಲ 19 ಸ್ಥಾನಗಳನ್ನು ಗಳಿಸಲಷ್ಟೇ ಯಶಸ್ವಿಯಾಗಿತ್ತು.

ಇದೀಗ ಸಿ.ಎಂ. ಇಬ್ರಾಹಿಂ ಅವರು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ವರಿಷ್ಟರು ಅವರ ರಾಜೀನಾಮೆಯನ್ನು ಅಂಗೀಕಾರ ಮಾಡುತ್ತಾರೋ ಅಥವಾ ಅವರನ್ನು ಹುದ್ದೆಯಲ್ಲಿ ಮುಂದುವರೆಯುವಂತೆ ಮನವೊಲಿಸುತ್ತಾರೋ ಕಾದು ನೋಡಬೇಕು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ