October 5, 2024

ಕರ್ನಾಟಕದ ಕಾಂಗ್ರೇಸ್ ಸರ್ಕಾರ ತಾನು ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಜೂನ್ 11ರಿಂದ ಅನುಷ್ಟಾನಕ್ಕೆ ತರಲು ಉದ್ದೇಶಿಸಿದ್ದು ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

1. ರಾಜ್ಯದ ಮಹಿಳೆಯರಿಗೆ ಕರ್ನಾಟಕ ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಈ ಯೋಜನೆ ಅನ್ವಯ
2. ರಾಜಹಂಸ, ಐರಾವತಿ ಸೇರಿದಂತೆ ಹವಾನಿಯಂತ್ರಿತ ಐಷಾರಾಮಿ ಬಸ್‍ಗಳ ಪ್ರಯಾಣಕ್ಕೆ ಈ ಯೋಜನೆ ಅನ್ವಯವಾಗುವುದಿಲ್ಲ.
3. ಬಿ.ಎಂ.ಟಿ.ಸಿ., ಕೆ.ಎಸ್.ಆರ್.ಟಿ.ಸಿ. ಸೇರಿದಂತೆ ನಾಲ್ಕು ವಿಭಾಗದ ಸಾಮಾನ್ಯ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಮಾತ್ರ ಇದು ಅನ್ವಯ
4. ಜೂನ್ 11ರಿಂದ ಈ ಯೋಜನೆ ಅಧಿಕೃತವಾಗಿ ಜಾರಿ. ಅಂದಿನಿಂದ ರಾಜ್ಯದ ಮಹಿಳೆಯರು ರಾಜ್ಯದಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡಬಹುದು.
5. ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಮೂರು ತಿಂಗಳ ಒಳಗಾಗಿ ಸ್ಮಾರ್ಟ್ ಕಾರ್ಡ್‍ಗಳನ್ನು ಪಡೆಯುವುದು.
6. ಮೂರು ತಿಂಗಳ ವರೆಗೆ ಆಧಾರ್ ಕಾರ್ಡ್ ಮತ್ತು ಇತರೆ ಐಡಿ ಕಾರ್ಡ್‍ಗಳನ್ನು ತೋರಿಸಿ ಪ್ರಯಾಣ ಮಾಡಬಹುದಾಗಿದೆ.
7. ಬಿ.ಎಂ.ಟಿ.ಸಿ. ಹೊರತುಪಡಿಸಿ ಉಳಿದ ವಿಭಾಗಗಳ ಬಸ್ ಗಳಲ್ಲಿ ಶೇಕಡಾ 50ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲು ಇಡಬೇಕು.
8. ಈ ಯೋಜನೆಯಡಿಯಲ್ಲಿ ಸಾರಿಗೆ ನಿಗಮಗಳಿಗೆ ತಗಲುವ ವೆಚ್ಚವನ್ನು ಸ್ಮಾರ್ಟ್ ಕಾರ್ಡ್ ದತ್ತಾಂಶ ಆದರಿಸಿ ಸರ್ಕಾರದಿಂದ ಪಾವತಿಸಲಾಗುವುದು.

ಯೋಜನೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ. ಎಸ್. ಅವರು ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ನಿರಂತರ ಸುದ್ದಿ ಹಾಗೂ ಉಪಯುಕ್ತ ಮಾಹಿತಿಗಳಿಗಾಗಿ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/IkFCXal7O5ODMBHsmKv9ak

ಜಾವಳಿ : ವಿಜೃಂಭಣೆಯಿಂದ ನಡೆದ ಮಹಾಗಣಪತಿ ಸ್ವಾಮಿ ಹಾಗೂ ನಾಗದೇವರ ಅಷ್ಟಬಂಧ ಪುನರ್ ಪ್ರತಿಷ್ಠಾಪನೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ