October 5, 2024

ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕವಿಗೋಷ್ಠಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮೂಡಿಗೆರೆ ಬಾಲಭವನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೂರಿ ಶ್ರೀನಿವಾಸ್ ಮಕ್ಕಳಿಗೆ ಎಳೆವೆಯಿಂದಲೇ ಕನ್ನಡ ನಾಡುನುಡಿಯ ಬಗ್ಗೆ, ನಮ್ಮ ಸಾಂಸ್ಕøತಿಕ ಹಿರಿಮೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳಿಗೆ ಅತಿಯಾದ ಮೊಬೈಲ್ ಗೀಳು ಮಾರಕವಾಗಿ ಪರಿಣಮಿಸಿದೆ. ನಮ್ಮ ಮಕ್ಕಳನ್ನು ಮೊಬೈಲ್ ನಿಂದ ದೂರ ಇರಿಸಬೇಕು ಎಂದರೆ ಅವರಲ್ಲಿ ಸೃಜನಾತ್ಮಕ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡುವಂತೆ ಮಾಡಬೇಕು ಎಂದರು. ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರಕಬೇಕು, ಶಿಕ್ಷಣ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವವನ್ನು ಅರಳಿಸುವಂತಿರಬೇಕು, ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೂಡಿಗೆರೆ ಕ್ಷೇತ್ರಶಿಕ್ಷಣಾಧಿಕಾರಿ ಹೇಮಂತ್ ರಾಜ್ ಅವರು ಮಾತನಾಡಿ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳಿಗೆ ಸದಾ ಬಾಗಿಲು ತೆರೆದಿರುತ್ತವೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸಮವಸ್ತ್ರ, ಬಿಸಿಯೂಟ, ಸೈಕಲ್, ಹಾಸ್ಟೆಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುತ್ತದೆ. ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಾಂಸ್ಕøತಿಕ, ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಇವುಗಳ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮವದಲ್ಲಿ ಉದಯೋನ್ಮುಖ ಯುವ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚನ ಮಾಡಿದರು. ರಾಷ್ಟ್ರೀಯ ಕಬ್ಬಡ್ಡಿಯಲ್ಲಿ ಚಿನ್ನದ ಪದಕ ಜಯಿಸಿದ ರಶ್ಮಿ ಸೇರಿದಂತೆ ಹಲವು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಿಗೆರೆ ಕ.ಸಾ.ಪ. ಅಧ್ಯಕ್ಷರಾದ ಹೆಚ್.ಟಿ. ಶಾಂತಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಕಡೂರು ತಾಲ್ಲೂಕು ಕ.ಸಾ.ಪ. ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ, ಕಸಬಾ ಹೋಬಳಿ ಕ.ಸಾ.ಪ. ಅಧ್ಯಕ್ಷ ಎಂ.ಎಸ್. ನಾಗರಾಜು, ಪತ್ರಕರ್ತ ಅಬ್ಬಾಸ್ ಕಿರುಗುಂದ, ನಿರ್ಮಲ ಮಂಚೇಗೌಡ, ಕಲಾವತಿ ರಾಜಣ್ಣ, ಅನಿತಾ ಜಗದೀಶ್, ನವೀನ್, ರವಿ ಪಟೇಲ್, ಹಸೈನಾರ್, ವಿನೋದ್, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ