October 5, 2024

ಬೆಣ್ಣೆಹಣ್ಣಿನ ಕುರಿತಾಗಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಡಾ. ಮುರಳಿಧರ್ ಗೌಡ ಅವರು ಪಿಹೆಚ್.ಡಿ. ಪದವಿ ಪಡೆದಿದ್ದಾರೆ.

ಡಾಕ್ಟರ್ ಮುರಳಿಧರ್  ಗೌಡ  ಅವರು ಮೂಡಿಗೆರೆ ತಾಲ್ಲೂಕು ಯು.ಹೊಸಳ್ಳಿ ಗ್ರಾಮದ ಕಾಫಿ ಬೆಳೆಗಾರರಾದ ಹೆಚ್.ಬಿ. ಜಗನ್ನಾಥಗೌಡ ಅವರ ಅಳಿಯ. ಕೊಡಗಿನ ಚೆಟ್ನಳ್ಳಿ ಸಂಶೋಧನಾ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮುರಳೀಧರ್ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬೆಣ್ಣೆಹಣ್ಣಿನ ಕುರಿತಾಗಿ ಸಂಶೋಧನೆ ಮಾಡಿದ್ದರು. ಅವರಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ರವರು ಪಿಹೆಚ್.ಡಿ. ಪದವಿ ಪ್ರದಾನ ಮಾಡಿದರು.

ಡಾ. ಮುರಳೀಧರ್ ಗೌಡ ಅವರ ಅನೇಕ ಕೃಷಿ ಮತ್ತು ತೋಟಗಾರಿಕಾ ಸಂಬಂಧಿ ಸಂಶೋಧನೆಗಳಲ್ಲಿ ನಿರತರಾಗಿದ್ದಾರೆ. ಇವರು ಮೂಡಿಗೆರೆ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ತಮ್ಮ ತೋಟಗಾರಿಕಾ ಪದವಿ ವ್ಯಾಸಂಗ ಮಾಡಿದ್ದರು. ಇವರ ಪತ್ನಿ ಡಾ. ಅಕ್ಷಿತಾ ಕೂಡಾ ಕೃಷಿ ವಿಜ್ಞಾನಿಯಾಗಿದ್ದಾರೆ.

ಡಾ. ಮುರಳಿಧರ್ ಅವರು ಪಿಹೆಚ್.ಡಿ. ಪದವಿ ಪಡೆದಿರುವುದಕ್ಕೆ ಅವರ ಕುಟುಂಬ ಸದಸ್ಯರು, ಸ್ನೇಹಿತರು, ಚೆಟ್ನಹಳ್ಳಿ ಸಂಶೋಧನಾ ಕೇಂದ್ರದ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ನಿರಂತರ ಸುದ್ದಿಗಳಿಗೆ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/IkFCXal7O5ODMBHsmKv9ak

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ