October 5, 2024

ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಅಂದರೆ ಜುಲೈ 5 ರಿಂದ 7 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಚಿಕ್ಕಮಗಳೂರ ಸೇರಿದಂತೆ ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಯ ಕೆಲ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿ ಮೂರು ದಿನಗಳಲ್ಲಿ ಮಲೆನಾಡು ಭಾಗದಲ್ಲಿ 115 ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.

ಜಿಲ್ಲಾಧಿಕಾರಿ ಮೀನಾ ನಾಗರಾಜ್

ಸಾರ್ವಜನಿಕರು, ಪ್ರವಾಸಿಗರು ಹೊಳೆ-ನದಿಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಮಳೆ ಬರುವ ಸಮಯದಲ್ಲಿಯಾಗಲಿ ಅಥವಾ ಮಳೆ ನಿಂತ ಸಮಯದಲ್ಲಿಯಾಗಲಿ ವಿದ್ಯುತ್ ಕಂಬ, ಮರಗಳ ಬಳಿ/ಕೆಳಗೆ ನಿಲ್ಲದಂತೆ ಸೂಚನೆ ನೀಡಿದೆ, ವೃದ್ಧರು ಮತ್ತು ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಸಂಬಂಧಿಸಿದವರು, ಪೋಷಕರು, ಶಾಲಾ ಮುಖ್ಯಸ್ಥರು ಕ್ರಮ ವಹಿಸಲು ಸೂಚನೆ ನೀಡಿದೆ. ಅಕಸ್ಮಾತ್ ಹಿರಿಯರು ಹೊರಗೆ  ಹೋಗಲೇಬೇಕಾದ  ಅನಿವಾರ್ಯವಿದ್ದಲ್ಲಿ ಮನೆಯ ಇತರ ಸದಸ್ಯರ ಜೊತೆ ಹೋಗಬೇಕು..

ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ನಿರಂತರ ಸುದ್ದಿಗಳಿಗಾಗಿ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/DDXjmfQaBa0HJQqmKf7y89

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ