October 5, 2024

ಮೂಡಿಗೆರೆ ತಾಲ್ಲೂಕಿನ ಚಿಕ್ಕಹಳ್ಳ ರಸ್ತೆಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಪೂರ್ಣಗೊಳ್ಳದೇ ಈ ಭಾಗದ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗಿದೆ.

ಕಾಮಗಾರಿ ಪ್ರಾರಂಭಮಾಡಿ ವರ್ಷವಾಗುತ್ತಾ ಬಂದರೂ ಸೇತುವೆ ಸಂಚಾರಕ್ಕೆ ಮುಕ್ತಗೊಂಡಿಲ್ಲ.

ಈ ರಸ್ತೆಗೆ ಪರ್ಯಾಯವಾಗಿ ಈಗ ಸಂಚರಿಸುತ್ತಿರುವ ರಸ್ತೆಯು ತುಂಬಾ ಕಿರಿದಾಗಿದ್ದು, ಎದುರುಬದರು ವಾಹನಗಳು ಬಂದಾಗ ವಾಹನ ಸವಾರರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.

ಈ ರಸ್ತೆ ಪ್ರಮುಖ ರಸ್ತೆಯಾಗಿದ್ದು ಪ್ರತಿದಿನ ಇಲ್ಲಿ ನೂರಾರು ವಾಹನಗಳು ಓಡಾಟ ನಡೆಸುತ್ತವೆ. ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವ ಕಾರ್ಮಿಕರು ಮತ್ತು ತಮ್ಮ ದಿನನಿತ್ಯದ ವ್ಯವಹಾರಕ್ಕೆ ಈ ರಸ್ತೆಯಲ್ಲಿ ಸಾಗುವ ಜನರಿಗೆ ಬಹಳ ತೊಂದರೆಯಾಗಿದೆ.

ಈ ರಸ್ತೆ ಮೂಡಿಗೆರೆ ಮತ್ತು ಗುಲ್ಲನ್ ಪೇಟೆ ನಡುವೆ ಸಂಪರ್ಕ ರಸ್ತೆಯಾಗಿದೆ. ಅನೇಕ ಗ್ರಾಮಗಳಿಗೆ ಈ ರಸ್ತೆ ಪ್ರಮುಖ ಸಂಪರ್ಕ ಸೇತುವಾಗಿದೆ.

ಈ ಬಗ್ಗೆ ಸಾರ್ವಜನಿಕರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಸಂಬಂಧಿಸಿದ ಗುತ್ತಿಗೆದಾರರು ಮತ್ತು ಇಂಜಿನಿಯರ್ ಗಳು ಈ ಬಗ್ಗೆ ಮುತುವರ್ಜಿ ವಹಿಸಿ ಆದಷ್ಟು ಬೇಗ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ