October 5, 2024

ಆಂದ್ರಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಶುಕ್ರವಾರ ಉಡಾವಣೆ ಮಾಡಿದ ಚಂದ್ರಯಾನ 3ರ ತಂಡದಲ್ಲಿ ನಮ್ಮ ಚಿಕ್ಕಮಗಳೂರು ಜಿಲ್ಲೆಯ ವಿಜ್ಞಾನಿಯೊಬ್ಬರು ಇರುವುದು ಜಿಲ್ಲೆಗೆ ಹೆಮ್ಮೆ ತಂದಿದೆ.

ಬಾಳೆಹೊನ್ನೂರು ಸಮೀಪದ ತುಪ್ಪೂರು ಗ್ರಾಮದ ಬಾಳೆಹೊನ್ನೂರು ಪಟ್ಟಣದಲ್ಲಿ ಕಾಫಿ ಉದ್ಯಮ, ವ್ಯವಹಾರ ನಡೆಸುತ್ತಿರುವ ಕೇಶವಮೂರ್ತಿ, ಮಂಗಳ ದಂಪತಿಗಳ ಪುತ್ರಿ ಡಾ. ಕೆ.ನಂದಿನಿ ಚಂದ್ರಯಾನ 3 ತಂಡದಲ್ಲಿ ಇದ್ದು ಶುಕ್ರವಾರ ನಡೆದ ಯಶಸ್ವಿ ಉಡಾವಣೆಯಲ್ಲಿ ಪಾಲ್ಗೊಂಡಿರುವುದು ಆಕೆಯ ಕುಟುಂಬಸ್ಥರು ಸೇರಿದಂತೆ ಸ್ಥಳೀಯರಲ್ಲಿ ಹರ್ಷ ಮೂಡಿಸಿದೆ.

ಡಾ.ನಂದಿನಿ ಕಳೆದ 8 ವರ್ಷಗಳಿಂದ ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇವರು 2019ರ ಚಂದ್ರಯಾನ 2ರ ತಂಡದಲ್ಲೂ ಭಾಗವಹಿಸಿದ್ದು, ಸತತ ಎರಡನೇ ಬಾರಿಯೂ ಕಾರ್ಯನಿರ್ವಹಿಸಿ ಬಾಳೆಹೊನ್ನೂರಿಗೆ ಕೀರ್ತಿ ತಂದಿದ್ದಾರೆ.

ನಂದಿನಿ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಳೆಹೊನ್ನೂರಿನ ನಿರ್ಮಲಾ ಕಾನ್ವೆಂಟ್ನಲ್ಲಿ ಮಾಡಿ, ನಂತರ 12ನೇ ತರಗತಿಯವರೆಗೆ ಸೀಗೋಡು ಜವಾಹರ್ ನವೋದಯ ವಿದ್ಯಾಲಯ ದಲ್ಲಿ ವ್ಯಾಸಂಗ ಮಾಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಬಿಎಸ್ಸಿ, ಎಂಎಸ್ಸಿ ವಿದ್ಯಾಭ್ಯಾಸ, ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್ನಲ್ಲಿ ಪೂರೈಸಿದ್ದಾರೆ.

ಇದೇ ಸಂಸ್ಥೆಯಲ್ಲಿ 5 ವರ್ಷಗಳ ಪಿಎಚ್ಡಿ ಪೂರೈಸಿ, ನಂತರ ಬೆಂಗಳೂರು ಇಸ್ರೋದಲ್ಲಿ ಉದ್ಯೋಗದಲ್ಲಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ