October 5, 2024

ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಬಿ.ಜೆ.ಪಿ. ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಪರ್ಯಾಯವಾಗಿ ಕಾಂಗ್ರೇಸ್ ನೇತೃತ್ವದಲ್ಲಿ ವಿರೋಧಪಕ್ಷಗಳು ಒಟ್ಟುಗೂಡುತ್ತಿವೆ.

ಅದರ  ಅಂಗವಾಗಿ ಬೆಂಗಳೂರಿನಲ್ಲಿ ನಿನ್ನೆಯಿಂದ ನಡೆಯುತ್ತಿರುವ ವಿರೋಧ ಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ ಇಂದು ಮಹತ್ವದ ನಿರ್ಣಯ ಕೈಗೊಂಡು ತಮ್ಮ ನೂತನ ಮೈತ್ರಿಕೂಟಕ್ಕೆ INDIA ಎಂದು ನಾಮಕರಣ ಮಾಡಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ NDA vs INDIA ಮೈತ್ರಿಕೂಟಗಳ ನಡುವಿನ ರಣಕಣವಾಗಿ ಮಾರ್ಪಾಡಾಗಲಿದೆ.

INDIA (Indian National Democratic Inclusive Alliance) ಎಂದು ತಮ್ಮ ಮೈತ್ರಿಕೂಟಕ್ಕೆ ಹೆಸರು ಇಡಲು ಎಲ್ಲಾ ಪಕ್ಷಗಳು ಸರ್ವಾನುಮತದಿಂದ ತೀರ್ಮಾನಿಸಿವೆ.

ಎರಡು ದಿನಗಳ ಸಭೆಯಲ್ಲಿ ಕಾಂಗ್ರೇಸ್ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಾದ ಎಂ ಕೆ ಸ್ಟಾಲಿನ್, ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್, ಹೇಮಂತ್ ಸೊರೆನ್, ಮಮತಾ ಬ್ಯಾನರ್ಜಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದಾರೆ.

ವಿಪಕ್ಷಗಳ ಮಹಾ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ರಾಜ್ಯ ಮಟ್ಟದಲ್ಲಿ ನಮ್ಮಲ್ಲಿ ಕೆಲವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬುದು ನಮಗೆ ತಿಳಿದಿದೆ, ಈ ಭಿನ್ನಾಭಿಪ್ರಾಯಗಳು ಸೈದ್ಧಾಂತಿಕವಲ್ಲ, ಈ ಭಿನ್ನಾಭಿಪ್ರಾಯಗಳು ಅಷ್ಟು ದೊಡ್ಡದಲ್ಲ. ಬಡವರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ತೆರೆಮರೆಯಲ್ಲಿ ಮೌನವಾಗಿ ಹತ್ತಿಕ್ಕಲಾಗುತ್ತಿದೆ. ನಾವು ಇವರೆಲ್ಲರ ಪರ ಹೋರಾಟ ನಡೆಸುವುದು ಮುಖ್ಯವಾಗಿದೆ” ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ನಾವು 26 ಪಕ್ಷಗಳಿದ್ದು, 11 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದೇವೆ. ಬಿಜೆಪಿ ಸ್ವತಃ 303 ಸ್ಥಾನಗಳನ್ನು ಪಡೆಯಲು ಸಾಧ್ಯವಾಗದೆ ಮಿತ್ರಪಕ್ಷಗಳ ಮತಗಳನ್ನು ಬಳಸಿತು. ಕೆಲಸವಾದ ನಂತರ ತಿರಸ್ಕರಿಸಿತು” ಸರ್ಕಾರದ ನೀತಿಯನ್ನು ಟೀಕಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ