October 5, 2024

ಮಾಧ್ಯಮಗಳಿಲ್ಲದಿದ್ದರೆ ಪ್ರಪಂಚದಲ್ಲಿ ನಡೆಯುವ ನೈಜ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲು ಸಾಧ್ಯವಿಲ್ಲ. ಕಾಲ ಬದಲಾದಂತೆ ಈಗ ಮಾಧ್ಯಮಗಳು ಡಿಜಿಟಲ್ ಮಾಧ್ಯಮವಾಗಿ ಮಾರ್ಪಾಡಾಗಿದ್ದು, ಶೀಘ್ರವಾಗಿ ಮಾಹಿತಿ ತಲುಪಿಸುವ ಕೆಲಸ ಪತ್ರಿಕಾರಂಗ ಮಾಡುತ್ತಿದೆ ಎಂದು ಯುರೇಕಾ ಅಕಾಡೆಮಿ ಸಂಸ್ಥಾಪಕ ದೀಪಕ್ ದೊಡ್ಡಯ್ಯ ಹೇಳಿದರು.

ಅವರು ಶುಕ್ರವಾರ ಮೂಡಿಗೆರೆ ಪಟ್ಟಣದ ತಾ.ಪಂ. ಪಂಡಿತ್ ದಿನ್ ದಯಾಳ್ ಉಪಾಧ್ಯಾಯ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜ ತಿದ್ದುವ ದೊಡ್ಡ ಶಕ್ತಿವೊಂದಿದ್ದರೆ ಅದು ಪತ್ರಿಕಾರಂಗ. ಪತ್ರಕರ್ತರು ನಿರ್ಭಯವಾಗಿ ಯಾವುದೇ ಮುಲಾಜಿಲ್ಲದೇ ವಸ್ತುನಿಷ್ಟ ಸುದ್ದಿಗಳನ್ನು ವರದಿ ಮಾಡಿದರೆ ಸಮಾಜ ತಾನಾಗಿಯೇ ಪರಿವರ್ತನೆ ಆಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ತಾ.ಪಂ. ಇಒ ಡಾ.ರಮೇಶ್ ಮಾತನಾಡಿ, ರಸಪ್ರಶ್ನೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಭಾಗವಹಿಸುವುದರಿಂದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಹಕಾರಿಯಾಗುತ್ತದೆ. ಅಲ್ಲದೇ ವಿದ್ಯಾರ್ಥಿಗಳು ಪ್ರತಿನಿತ್ಯ ದಿನಪತ್ರಿಕೆ ಓದುವ ಹವ್ಯಾಸ ಮಾಡಬೇಕು. ಪತ್ರಿಕೆಯಲ್ಲಿ ಬರುವ ಸಂಪಾದಕೀಯ ಪುಟವನ್ನು ನಿತ್ಯ ಓದುವ ಹವ್ಯಾಸ ಮಾಡಿಕೊಂಡರೆ ಅದರಿಂದ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಹಾಗೂ ಜ್ಞಾನ ಸಂಪಾಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಶ್ರೀಷಾ ಎಂ.ದೇವಾಂಗ್, ರಶ್ಮೀ, ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಧನಲಕ್ಷ್ಮಿ, ಸುರೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಬೆಥನಿ ಶಾಲೆಯ ಅಪೇಕ್ಷಾ, ರಚನಾ ಸುಧನ್, ದ್ವಿತೀಯ ಸ್ಥಾನ ಮೂಡಿಗೆರೆ ಎಂಇಎಸ್ ಶಾಲೆಯ ಮಂಜುನಾಥ್, ಅನಿಕೇತನ, ತೃತೀಯ ಸ್ಥಾನ ಕೊಟ್ಟಿಗೆಹಾರ ಪ್ರೌಢಶಾಲೆಯ ಸಾನಿಕ್, ಅಖಿಲೇಶ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಆನಂದ್ ಕಣಚೂರು ವಹಿಸಿದ್ದರು. ಪ.ಪಂ.ಸದಸ್ಯರಾದ ಕಮಲಮ್ಮ, ಮನೋಜ್, ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಬ್ರಿಜೇಶ್, ಹಳೆಮೂಡಿಗೆರೆ ಗ್ರಾ.ಪಂ. ಸದಸ್ಯ ಚಂದ್ರೇಶ್, ಕಲಾವಿದ ಬಕ್ಕಿ ರವಿ, ವಿನೋಧ್ ಕಣಚೂರು, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಯು.ಆರ್.ಶಿವಕಾಶಿ, ಉಪಾಧ್ಯಕ್ಷ ತನು ಕೊಟ್ಟಿಗೆಹಾರ, ಸಹಕಾರ್ಯದರ್ಶಿ ಪ್ರವೀಣ್‍ಪೂಜಾರಿ, ಖಜಾಂಚಿ ವಿಜಯ್‍ಕುಮಾರ್ ವೇದಿಕೆಯಲ್ಲಿದ್ದರು. ಪ್ರಸನ್ನಗೌಡಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಹೆಚ್.ಅಮರ್‍ನಾಥ್ ಕಾರ್ಯಕ್ರಮ ನಿರೂಪಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ