ಮೂಡಿಗೆರೆ ತಾಲ್ಲೂಕು ಜಾವಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಗ್ರಾ.ಪಂ.ಅಧ್ಯಕ್ಷರಾಗಿ ಎಂ.ಪಿ.ಪ್ರದೀಪ್, ಉಪಾಧ್ಯಕ್ಷರಾಗಿ ಮನೋಹರ್ ಜಾವಳಿ ಆಯ್ಕೆಯಾಗಿದ್ದಾರೆ.
ಅಯ್ಕೆಯಾದ ನೂತನ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅಭಿನಂದಿಸಿದರು. ಈಸಂದರ್ಭದಲ್ಲಿ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೇಣಿಕ್ ಮರಸಣಿಗೆ, ಕೆಪಿಸಿಸಿ ಸದಸ್ಯರಾದ ಕೆ.ಆರ್.ಪ್ರಭಾಕರ್, ಬಾಳೂರು ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ಜಿ.ಶ್ರೀನಾಥ್, ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.