October 5, 2024

ಸಾಮಾಜಿಕ ಜಾಲತಾಣಗಳನ್ನು ಬಳಸುವವರು ತಮ್ಮ ಚಟುವಟಿಕೆಗಳಿಂದ ಉಂಟಾಗುವ ಪರಿಣಾಮಗಳು ಬಗ್ಗೆ ಎಚ್ಚರದಿಂದ ಇರಬೇಕು ಜಾಲತಾಣಗಳಲ್ಲಿ ಹಾಕುವ ಯಾವುದೇ ನಿಂದನಾತ್ಮಕ ಪೋಸ್ಟ್ ಗಳಿಗೆ ಪೋಸ್ಟ್ ಗಳನ್ನು ಹಾಕಿದವರು ಪರಿಣಾಮ ಎದುರಿಸಲೇಬೇಕು. ಮಾಡಿದ ತಪ್ಪಿಗೆ ಕ್ಷಮೆ ಕೇಳಿದಾಕ್ಷಣ ಕ್ರಿಮಿನಲ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.

ತಮಿಳುನಾಡಿನ ಮಾಜಿ ಶಾಸಕ ಹಾಗೂ ನಟ ಎಸ್.ವಿ.ಶೇಖರ್ ಎಂಬುವವರು 2018ರಲ್ಲಿ ಫೇಸ್ಬುಕ್ ನಲ್ಲಿ ಪರ್ತಕರ್ತೆಯರ ಬಗ್ಗೆ ಅವಹೇಳನಕಾರಿಯಾದ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿತ್ತು. ಅದನ್ನು ರದ್ದುಪಡಿಸುವಂತೆ ಅವರು ಮದ್ರಾಸ್ ಹೈಕೋರ್ಟ್ ಗೆ ಹೋಗಿದ್ದರು.ಅಲ್ಲಿ ಅರ್ಜಿ ವಜಾಗೊಂಡಿತ್ತು. ಅವರು ಸುಪ್ರೀಂ ಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿದ್ದರು.ಅದನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸೋಷಿಯಲ್ ಮೀಡಿಯಾ ಬಳಕೆಯ ಬಗ್ಗೆ ಸುದೀರ್ಘವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಮಾನಹಾನಿಕಾರವಾಗಿ ಸಂದೇಶಗಳನ್ನು ಹರಿಯಬಿಡುವುದು ಮತ್ತು ಅಂತಹ ಸಂದೇಶಗಳನ್ನು ಫಾರ್ವರ್ಡ್ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹ ಅಪರಾಧಗಳಿಗೆ ಕೇವಲ ಕ್ಷಮೆ ಕೇಳುವುದರಿಂದ ಶಿಕ್ಷಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ