October 5, 2024

ಚಿಕ್ಕಮಗಳೂರು ಜಿಲ್ಲೆಯ  ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಬೃಹತ್ ಗಾತ್ರದ ಜಿಂಕೆ ಬೇಟೆ ಮಾಡಿ ಪಾರ್ಟಿ ಮಾಡುತ್ತಿದ್ದಾಗ ಅಧಿಕಾರಿಗಳ ದಾಳಿ ನಡೆಸಿದ್ದು ಆರು ಜನರನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮೇಲಿನ ಹುಲುವತ್ತಿ ಗ್ರಾಮದ ಅರಣ್ಯ ವ್ಯಾಪ್ತಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಸಂಗಮ ಕಾಫಿ ತೋಟದಲ್ಲಿ ಬೃಹತ್ ಗಾತ್ರದ ಜಿಂಕೆ ಶಿಕಾರಿ ಕಳ್ಳ ಬೇಟೆ ಮಾಡಿ ಅಲ್ಲಿಯೆ ಮಾಂಸವನ್ನು ಹಸನು ಮಾಡಿ ಬಾಡೂಟಕ್ಕೆ ತಯಾರಿ ನಡೆಸುತ್ತಿದ್ದಾಗ  ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ  ಮುತ್ತೊಡಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ  ಜಿಂಕೆ‌ ಶಿಕಾರಿ ಮಾಡಿರುವ ಆರೋಪಿಗಳು ಕಾಫಿ ತೋಟದಲ್ಲಿ   ಮಾಂಸದೂಟ ತಯಾರಿ ಮಾಡಿ ಪಾರ್ಟಿ ಮಾಡಲು ತಯಾರಿ ನಡೆಸಿದ್ದರು ಎನ್ನಲಾಗಿದೆ.

ಶಿಕಾರಿ ಮಾಡಿ ಅಲ್ಲೇ ಬಾಡೂಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಪಡೆದ ಅರಣ್ಯ ಅಧಿಕಾರಿಗಳ ತಂಡ ಆ ಪ್ರದೇಶವನ್ನು ಸುತ್ತುವರಿದು ಆರೋಪಿಗಳು ತಪ್ಪಿಸಿಕೊಳ್ಳಲು ಅವಕಾಶವಾಗದಂತೆ ಆರು ಜನರನ್ನು ಬಂಧಿಸಿದ್ದಾರೆ.

ಶಿಕಾರಿ ಮಾಡಿದ‌ ಆರೋಪದ ಮೇಲೆ‌ ಮೊಹಮ್ಮದ್ ಶಕೀಲ್, ಇರ್ಫಾನ್, ನೌಫಲ್, ಶಾಯಿದ್, ರಾಜಿಕ್ ಎಂಬುವವರನ್ನು  ಬಂಧಿಸಲಾಗಿದೆ. ಬಂಧಿತರೆಲ್ಲರೂ ಮಂಗಳೂರು ಮೂಲದವರು ಎನ್ನಲಾಗಿದೆ. ಈ ಭಾಗದಲ್ಲಿ ಇವರು ಈ ಹಿಂದೆಯೂ ಇಂತಹ ಕೃತ್ಯದಲ್ಲಿ ತೊಡಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿದೆ. ಇವರಿಗೆ ಸ್ಥಳೀಯವಾಗಿ ಕೆಲವರು ಸಹಕಾರ ನೀಡುತ್ತಿರುವ ಬಗ್ಗೆಯೂ ಸಂಶಯಿಸಲಾಗಿದೆ. ಆರೋಪಿಗಳು  ಅಂದಾಜು 25 ಕೆ.ಜಿ. ತೂಕದ‌ ಜಿಂಕೆಯನ್ನು  ಶಿಕಾರಿ ಮಾಡಿದ್ದಾರೆ ಎನ್ನಲಾಗಿದೆ.

ಆರೋಪಿಗಳಿಂದ 8 ಕೆ.ಜಿ. ಜಿಂಕೆ ಮಾಂಸದ ಜೊತೆಗೆ ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ. ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ