October 5, 2024

ಜಮೀನು ಸರ್ವೇ ಮತ್ತು ನಕ್ಷೆಗೆ ಅರ್ಜಿ ಇನ್ನೂ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸಲ್ಲಿಕೆ ಮಾಡಬಹುದಾಗಿದೆ.

ರಾಜ್ಯದ ರೈತರ ಜಮೀನಿನ ವಿವಿಧ ರೀತಿಯ ಸರ್ವೇ ಮತ್ತು ನಕ್ಷೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಲು ಇನ್ನು ಮುಂದೆ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಿಗೆ ಅಲೆಯಬೇಕಾಗಿಲ್ಲ.

ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಜಮೀನಿನ ಸರ್ವೇ ಮತ್ತು ನಕ್ಷೆಯ ಅರ್ಜಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದ ಬಾಪೂಜಿ ಕೇಂದ್ರಗಳಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.

ಈ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದು ; ಸಾರ್ವಜನಿಕರು ಇನ್ನು ಮುಂದೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗಳ ಮೋಜಿಣಿ ವ್ಯವಸ್ಥೆಯಡಿ “11 ಇ ಸ್ಕೆಚ್, ತತ್ಕಾಲ್ ಪೋಡಿ, ಭೂ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿ ಪಡೆಯಲು ತಾಲ್ಲೂಕು ಅಥವಾ ಹೋಬಳಿ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ಇನ್ನು ಮುಂದೆ ಗ್ರಾಮ ಪಂಚಾಯಿತಿ ಬಾಪೂಜಿ ಕೇಂದ್ರಗಳಲ್ಲಿಯೇ ಸದರಿ ಸೇವೆಯನ್ನು ಪಡೆಯಬಹುದಾಗಿದೆ ಎಂದಿದೆ.

ಇದಕ್ಕಾಗಿ ನಿಗದಿತ ಶುಲ್ಕದ ಪಟ್ಟಿಯನ್ನು ಪ್ರಕಟಿಸಿದೆ.

ಸರ್ಕಾರದ ಸುತ್ತೋಲೆ ಮತ್ತು ಸೇವಾ ಶುಲ್ಕದ ವಿವರ ಕೆಳಗಿನಂತಿದೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ