October 5, 2024

ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದರಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಇನ್ನೂರು ರೂಪಾಯಿ ಕಡಿತಗೊಳಿಸಿದೆ.

ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ನವದೆಹಲಿಯಲ್ಲಿ ಮಾಹಿತಿ ನೀಡಿರುತ್ತಾರೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಗಣನೀಯವಾಗಿ ಕಡಿಮೆ ಮಾಡುವ ಮೂಲಕ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದೆ.

ಕಳೆದ ಕೆಲ ವರ್ಷಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಅಡುಗೆ ಅನಿಲ ಬೆಲೆ 14.2 ಕೆ.ಜಿ. ಸಿಲಿಂಡರ್ ಗೆ 1100 ರೂಗಳನ್ನು ಮೀರಿತ್ತು. ಇದರಿಂದ ದೇಶದ ಸಾಮಾನ್ಯ ಜನತೆಗೆ ದೊಡ್ಡ ಹೊರೆಯಾಗಿತ್ತು.

ಕೇಂದ್ರದಲ್ಲಿ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾಸ್ ಬೆಲೆ ಸತತವಾಗಿ ಏರಿಕೆಯಾಗುತ್ತಿದ್ದರಿಂದ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಏಕಾಏಕಿ 200 ರೂಪಾಯಿ ಬೆಲೆ ಕಡಿತ ಮಾಡುವ ಮೂಲಕ ಜನರ ಆಕ್ರೋಶವನ್ನು ತಣಿಸುವ ಕೆಲಸ ಮಾಡಿದೆ.

ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಜೊತೆಗೆ ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಕೇಂದ್ರದ ಈ ನಿರ್ಧಾರ ಮಹತ್ವದ ಪಡೆದಿದೆ.

ಇದೀಗ ಗೃಹಬಳಕೆ ಅಡುಗೆ ಸಿಲಿಂಡರ್ ಬೆಲೆ ರೂ. 900ರ ಆಸುಪಾಸಿನಲ್ಲಿ ಇರಲಿದೆ ಎನ್ನಲಾಗಿದೆ. ನೂತನ ಬೆಲೆಯ ನಾಳೆಯಿಂದಲೇ (ಆಗಸ್ಟ್ 30) ಜಾರಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.

ಒಟ್ಟಾರೆಯಾಗಿ ಸಾವಿರ ದಾಟಿದ್ದ ಸಿಲಿಂಡರ್ ಬೆಲೆಯಿಂದ ಕಂಗಾಲಾಗಿದ್ದ ಜನಸಾಮಾನ್ಯರು ಕೇಂದ್ರದ ಈ ನಿರ್ಧಾರದಿಂದ ಕೊಂಚ ನಿರಾಳವಾಗಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ