October 5, 2024

ಇಂದಿನಿಂದ ಏಷ್ಯಾಕಪ್ ಕ್ರಿಕೆಟ್ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ. ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಬಹುತೇಕ ಪಂದ್ಯಗಳು ಶ್ರೀಲಂಕಾದಲ್ಲಿ ಆಯೋಜನೆಗೊಂಡಿವೆ.

ಮುಲ್ತಾನ್ ನಲ್ಲಿ ನಡೆಯಲಿರುವ ಇಂದಿನ ಉದ್ಘಾಟನಾ ಪಂದ್ಯದಲ್ಲಿ ಅತಿಥೇಯ ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಲಿವೆ. ಸೆಪ್ಟಂಬರ್ 2 ರಂದು ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ಮುಖಾಮುಖಿಯಾಗಲಿವೆ. ಸೆಪ್ಟಂಬರ್ 4 ರಂದು ಭಾರತ ನೇಪಾಳ ತಂಡವನ್ನು ಎದುರಿಸಲಿದೆ.

ಏಷ್ಯಾದ ಆರು ಕ್ರಿಕೆಟ್ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ ಮತ್ತು ನೇಪಾಳ ತಂಡಗಳಿದ್ದು, ಗ್ರೂಪ್ ಬಿ ನಲ್ಲಿ ಶ್ರೀಲಂಕಾ, ಬಾಂಗ್ಲಾ ಮತ್ತು ಅಪ್ಘಾನಿಸ್ತಾನ ತಂಡಗಳಿವೆ.

ಎರಡು ಗುಂಪುಗಳ ಅಗ್ರ ಎರಡು ತಂಡಗಳು ಸೂಪರ್-4 ಹಣಾಹಣಿ ನಡೆಸಲಿದ್ದು, ಅಲ್ಲಿ ಆರು ಪಂದ್ಯಗಳು ನಡೆಯಲಿವೆ. ಸೆಪ್ಟಂಬರ್ 15ರಂದು ಫೈನಲ್ ಪಂದ್ಯ ಕೊಲಂಬೋದಲ್ಲಿ ನಡೆಯಲಿದೆ.

ಎಲ್ಲಾ ಪಂದ್ಯಗಳು ಹಗಲು ರಾತ್ರಿ ಪಂದ್ಯಗಳಾಗಿದ್ದು, ಮಧ್ಯಾಹ್ನ 3 ರಿಂದ ಪ್ರಾರಂಭವಾಗುತ್ತವೆ. ಸ್ಟಾರ್ ಸ್ಪೋಟ್ರ್ಸ್ ನಲ್ಲಿ ಪಂದ್ಯಗಳ ನೇರಪ್ರಸಾರ ವೀಕ್ಷಿಸಬಹುದಾಗಿದೆ.

 

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ