ತೇಜಸ್ವಿ ಅವರ 85 ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸೆಪ್ಟೆಂಬರ್ 08 ರಂದು ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸೆಪ್ಟಂಬರ್ 8 ರ ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಥಾನದ ಸಭಾಂಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಲೇಖಕಿ, ಕನ್ನಡ ಉಪನ್ಯಾಸಕಿ ಡಾ. ಸಚಿತಾ ಬನ್ನಾಡಿ ಅವರು “ತೇಜಸ್ವಿ ತೋರಿದ ಲೋಕದೃಷ್ಟಿ” ಎಂಬ ವಿಚಾರವಾಗಿ ಉಪನ್ಯಾಸ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ತೇಜಸ್ವಿ ಅಭಿಮಾನಿಗಳು ಮತ್ತು ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದು ಎಂದು ಪ್ರತಿಷ್ಠಾನದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 08263 200012, 96630 98873, 94493 09067