October 5, 2024

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸೆ.9ರಿಂದ 15ರವರೆಗೆ ಜೇಸಿ ಸಂಸ್ಥೆ ವತಿಯಿಂದ ಒಂದು ವಾರದ ಕಾಲ ಜೇಸಿ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ಮೂಡಿಗೆರೆ ಜೇಸಿಐ ಸಂಸ್ಥೆಯ ಅಧ್ಯಕ್ಷೆ ಸವಿತಾ ರವಿ ಯವರು ತಿಳಿಸಿದ್ದಾರೆ.

ಅವರು ಮೂಡಿಗೆರೆ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮ ಮೂಡಿಗೆರೆ ಜೇಸಿ ಭವನದಲ್ಲಿ ಏರ್ಪಡಿಸಲಾಗಿದ್ದು,  ಸೆ.9ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಮೂಡಿಗೆರೆ ತಹಸೀಲ್ದಾರ್ ಅವರು ನೆರವೇರಿಸಲಿದ್ದಾರೆ ಎಂದರು.

ಸೆಪ್ಟಂಬರ್ 9 ರಂದು ಹೃದಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಸಂಜೆ ಲೇಡಿ ಜೇಸಿ ಮತ್ತು ಜೆಜೆಸಿ ಸದಸ್ಯರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಸೆ.10ರಂದು ಬೆಳಗ್ಗೆ 10 ಗಂಟೆಗೆ ಮಾವಿನಕಟ್ಟೆ ಶಾಲೆಯಲ್ಲಿ ಕುಡಿಯುವ ನೀರಿನ ಶುದ್ದೀಕರಣ ಯಂತ್ರದ ಹಸ್ತಾಂತರ ಮತ್ತು ಕುಡಿಯುವ ನೀರಿನ ಜಲ ಮೂಲದ ಸ್ವಚ್ಛತಾ ಕಾರ್ಯಕ್ರಮ. ಸಂಜೆ ಜೇಸಿ ಭವನದಲ್ಲಿ ತಾಲೂಕು ಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ.

ಸೆ.11ರಂದು ಬೆಳಗ್ಗೆ 10 ಗಂಟೆಗೆ ಮಾರ್ಗಸೂಚಿ ನಾಮಫಲಕ ಅನಾವರಣ ಮತ್ತು ವಿದ್ಯುತ್ ಚಾಲಿತ ವಾಹನಗಳ ಅರಿವು ಕಾರ್ಯಕ್ರಮ, ಸಂಜೆ ಎಲ್‍ಕೆಜಿಯಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆಯಲಿದೆ ಎಂದರು.

ಸೆ.12ರಂದು  ಸಾರ್ವಜನಿಕರಿಗೆ ರಸಪ್ರಶ್ನೆ ಸ್ಪರ್ಧೆ, ಸಂಜೆ ಜೇಸಿ ಭವನದಲ್ಲಿ ಎಂಇಎಸ್ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ.

ಸೆ.13ರಂದು ಬೆಳಿಗ್ಗೆ 10 ಗಂಟೆಗೆ ಸಾರ್ವಜನಿಕರಿಗೆ ಸ್ವ-ಉದ್ಯೋಗ ಅರಿವು ಮತ್ತು ಪ್ರೇರಣಾ ಕಾರ್ಯಕ್ರಮ. ಸಂಜೆ ಬೆಥನಿ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಸೆ.14ರಂದು ಬೆಳಗ್ಗೆ 10 ಗಂಟೆಗೆ ಅಂತರಾಷ್ಟ್ರೀಯ ತರಬೇತಿದಾರ ಮತ್ತು ಮೈಸೂರಿನ ಚೇತನ್ ರಾಮ್ ಅವರಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಯಶಸ್ಸು ಎಂಬ ವಿಷಯದ ಬಗ್ಗೆ ತರಬೇತಿ, ಸಂಜೆ ಬಿಜಿಎಸ್ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ.

ಸೆ.15ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ, ಕಮಲಪತ್ರ ಪ್ರಧಾನ, ಜಿಲ್ಲೆಯ ಸಾಧಕರು ಹಾಗೂ ಯುವ ಪ್ರತಿಭೆಗಳಿಗೆ ಸನ್ಮಾನ, ಸ್ಪೂರ್ತಿ ಸಂಚಿಕೆ ಬಿಡುಗಡೆ, ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದರು.

ಛದ್ಮವೇಷ ಮತ್ತು ತಾಲೂಕು ಮಟ್ಟದ ನೃತ್ಯ ಸ್ಪರ್ಧೆಗೆ ಭಾಗವಹಿಸುವವರು ಸೆ.9ರೊಳಗೆ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಹೇಳಿದರು.

ಈ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಜೇಸಿಐ ಸೀನಿಯರ್ ಮೆಂಬರ್ ಅಸೋಸಿಯೇಷನ್  ನ ವಲಯ ಕಾರ್ಯದರ್ಶಿ ಎಚ್.ಕೆ.ಯೋಗೇಶ್, ಎಂ.ಡಿ.ವಿಜಯಕುಮಾರ್, ಪ್ರಸನ್ನ ಗೌಡಹಳ್ಳಿ,  ಮೂಡಿಗೆರೆ ಜೇಸಿ ಕಾರ್ಯದರ್ಶಿ ಪ್ರದೀಪ್ ಕುನ್ನಳ್ಳಿ, ಕಾರ್ಯಕ್ರಮದ ನಿರ್ದೇಶಕಿ ದೀಪಿಕಾ ಪ್ರಸಾದ್, ಸದಸ್ಯರಾದ ಕೆ.ಎನ್.ರವಿ, ಪಿ.ಕೆ.ಹಮೀದ್, ಎಂ.ಎಸ್.ಆಕಾಶ್ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ