October 5, 2024

ಶ್ರೀ ಬ್ರಹ್ಮಶ್ರೀ ನಾರಾಯಣಗುರು ಮತ್ತು ಶ್ರೀ ಮಹಾಗಣಪತಿ ಮಲಯಾಳಂ ಸೇವಾ ಸಮಿತಿ ವತಿಯಿಂದ ಜನ್ನಾಪುರದಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಜನ್ನಾಪುರ ವರ್ತಕರ ಭವನದಲ್ಲಿ ಓಣಂ ಪ್ರಯುಕ್ತ ಭಾನುವಾರು ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ರಂಗೋಲಿ ಸ್ಪರ್ಧೆ, ಮಡಿಕೆ ಒಡೆಯುವುದು, ಮ್ಯೂಸಿಕಲ್ ಛೇರ್, ಲೆಮನ್ ಅಂಡ್ ಸ್ಪೂನ್ ಸೇರಿದಂತೆ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನಾರಾಯಣಗುರು ಮಲೆಯಾಳಂ ಸಂಘದ ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಮಹೇಶ್ ಮಾನಾಡಿ ಓಣಂ ಹಬ್ಬವು ಮಲೆಯಾಳಿ ಸಮುದಾಯಕ್ಕೆ ಒಂದು ಪ್ರಮುಖ ಧಾರ್ಮಿಕ ಕಾರ್ಯಕ್ರಮವಾಗಿದೆ. ಇದನ್ನು ಯಾವುದೇ ಜಾತಿಮತಬೇದವಿಲ್ಲದೆ ಎಲ್ಲರು ಒಟ್ಟಾಗಿ ಆಚರಿಸುತ್ತೇವೆ. ಮನೆಮನೆಗಳಲ್ಲಿ ಓಣಂ ಆಚರಿಸುವುದರ ಜೊತೆಗೆ ಹೀಗೆ ನೆರೆಹೊರೆಯವರು ಒಟ್ಟಾಗಿ ಸೇರಿ ಆಚರಿಸಿದಾಗ ಹಬ್ಬಕ್ಕೆ ಇನ್ನಷ್ಟು ಅರ್ಥ ಬರುತ್ತದೆ. ಈ ಹಿನ್ನಲೆಯಲ್ಲಿ ಜನ್ನಾಪುರ ಘಟಕವು ಹಮ್ಮಿಕೊಂಡಿರುವ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಮಂಜುನಾಥ್, ಘಟಕದ ಮಾಜಿ ಅಧ್ಯಕ್ಷ ಕುಮಾರ್, ಗೌರವ ಅಧ್ಯಕ್ಷ ಕರುಣಾಕರ, ಘಟಕದ ಕಾರ್ಯದರ್ಶಿ ರವಿ ದೇವರಮಕ್ಕಿ, ಪ್ರಧಾನ ಕಾರ್ಯದರ್ಶಿ ರಂಜಿತ್ ಜೇನುಬೈಲ್, ಸಹಕಾರ್ಯದರ್ಶಿ ಸಂಕೇತ್, ಖಜಾಂಚಿ ಶ್ರೀಮತಿ ಶಿಲ್ಪಾ ಮುಂತಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ