October 5, 2024

ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದ ಬ್ರಹ್ಮಶ್ರಿ ನಾರಾಯಣಗುರುಗಳ ಚಿಂತನೆಗಳು ಸಮಾಜ ಸುಧಾರಣೆಗೆ ಪೂರಕವಾಗಿದೆ ಎಂದು ಉಪನ್ಯಾಸಕರಾದ ನವೀನ್ ಆನೆದಿಬ್ಬ ಹೇಳಿದರು.

ಬಣಕಲ್‌ನಲ್ಲಿ ಬಣಕಲ್ ಹಿರೇಬೈಲ್‌ನ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದಿಂದ ನಡೆದ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ನಾರಾಯಣಗುರುಗಳ ಕ್ರಾಂತಿಕಾರಿ ನಡೆ ಹಿಂದುಳಿದ ವರ್ಗಕ್ಕೆ ಮಾತ್ರವಲ್ಲದೇ ಎಲ್ಲಾ ಸಮುದಾಯಕ್ಕೂ ಇಂದಿಗೂ ಪ್ರಸ್ತುತವಾಗಿದೆ. ಅವರ ತತ್ವದಲ್ಲಿ  ಹಲವು ಧರ್ಮಗಳು ಒಟ್ಟಾಗಿ ಜೀವಿಸುವ ಹಾಗೂ ದೇಶದ ಅಖಂಡತೆಯನ್ನು ಪ್ರತಿಪಾದಿಸುವ ಚಿಂತನೆ ಅಡಗಿದೆ ಎಂದರು.

ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯ ಜೊತೆಗೆ ಜಗತ್ತನ್ನು ಒಂದೇ ಜಾತಿ ಒಂದೇ ಮತ ಒಂದೇ ಧರ್ಮದಲ್ಲಿ ಕಂಡ ಅವರ ವ್ಯಕ್ತಿತ್ವವನ್ನು ನೆನಪಿಸುವುದು ಹಾಗೂ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.  ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ