October 5, 2024

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಮೂಡಿಗೆರೆ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಶ್ರಾವಣ ಮಾಸದ ವಿಶೇಷ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬೇರುಗುಂಡಿ ಮಠದ ಶ್ರೀ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮಿಗಳು ದಿವ್ಯ ಸಾನಿಧ್ಯದಲ್ಲಿ ಸೆಪ್ಟಂಬರ್ 11ಕ್ಕೆ ಪಟ್ಟಣದ ಮಹಂತಿನ ಮಠದಲ್ಲಿ ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ ಬಿ.ಎಸ್.ಓಂಕಾರ್ ಹೇಳಿದರು.

ಅವರು ಮಂಗಳವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಖಿಲ ಭಾರತ ವೀರಶೈವ-ಲಿಂಗಾಯಿತ ಸಮುದಾಯದ ಸಂಘಟನೆ ತಾಲೂಕಿನಲ್ಲಿ ಕಳೆದ 1980ರಿಂದಲೂ ಕಾರ್ಯ ನಿರ್ವಹಿಸುತ್ತಿತ್ತು. ಸಮುದಾಯದ ಅಭಿವೃದ್ಧಿಗಾಗಿ ಈಗಾಗಲೇ ಅನೇಕ ಮಂದಿ ಹಿರಿಯರು ಶ್ರಮಿಸಿದ್ದಾರೆ. ಆದರೆ ಸಂಘಟನೆಯನ್ನು ಅಧಿಕೃತವಾಗಿ ನೊಂದಾಯಿತವಾಗಿರಲಿಲ್ಲ. ಹಾಗಾಗಿ ತಾಲೂಕಿನಲ್ಲಿ ಈಗಾಗಲೇ 800 ಮಂದಿ ನೊಂದಾಯಿತ ಸದಸ್ಯರನ್ನು ಸೇರ್ಪಡೆಗೊಳಿಸಿ, ಚುನಾವಣೆ ಮೂಲಕ 15 ಪುರುಷರು ಹಾಗೂ 6 ಮಹಿಳೆಯರು ಸೇರಿದಂತೆ 21 ಮಂದಿ ನಿರ್ದೇಶಕರನ್ನು ಆಯ್ಕೆ ಮಾಡಿದ್ದು, ಪದಾಧಿಕಾರಿಗಳ ಆಯ್ಕೆ ನಡೆಸಿ ಈಗ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮ ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಉದ್ಘಾಟನೆಯನ್ನು ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ನೆರವೇರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವನಮಾಲ ಮೃತ್ಯುಂಜಯ, ಕೊಡಗು ಜಿಲ್ಲಾ ವೀರಶೈವ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಸತೀಶ್, ಮುಖ್ಯ ಅತಿಥಿಗಳಾದಿ ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷೆ ಶಾಲಿನಿ ಅನಿಲ್, ಜಿಲ್ಲಾ ನಿರ್ದೇಶಕರಾದ ಪೂರ್ಣೇಶ್ ಮೂರ್ತಿ, ಡಾ.ಮೋಹನ್ ರಾಜಣ್ಣ, ಸುಶೀಲಾ, ವೀರಶೈವ ಸಮಾಜದ ತಾಲೂಕು ಘಟಕದ ಅಧ್ಯಕ್ಷೆ ರಾಜಲಕ್ಷ್ಮೀ ಕಾಂತರಾಜ್, ಗೌರವಾಧ್ಯಕ್ಷ ಬಿ.ಬಸವರಾಜ್, ಯುವ ಘಟಕದ ಅಧ್ಯಕ್ಷ ಆದರ್ಶ ಕನ್ನೆಹಳ್ಳಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಚಂದ್ರಶೇಖರ್ ಭಾಗವಹಿಸಲಿದ್ದಾರೆಂದು ತಿಳಿಸಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ರವಿ ಪಟೇಲ್ ಕೂವೆ, ಕಾರ್ಯದರ್ಶಿ ಬಿ.ಕೆ.ಚಂದ್ರಶೇಖರ್, ಖಚಾಂಚಿ ಎಂ.ಡಿ.ಇAದ್ರೇಶ್, ನಿರ್ದೇಶಕರಾದ ಎಚ್.ಆರ್.ಕಾಂತರಾಜ್, ಆದರ್ಶ ಕನ್ನೆಹಳ್ಳಿ ಉಪಸ್ಥಿತರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ