October 5, 2024

ಮೂಡಿಗೆರೆ ತಾಲ್ಲೂಕು ಕೇಂದ್ರದಲ್ಲಿರುವ ಹೊಯ್ಸಳ ಕ್ರೀಡಾಂಗಣದ ಅಭಿವೃದ್ಧಿ ವಿಚಾರವಾಗಿ ಶಾಸಕಿ ನಯನ ಮೋಟಮ್ಮ ಇಂದು ಅಧಿಕಾರಿಗಳ ಜೊತೆ ಖುದ್ದು ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದರು.

ತಾಲ್ಲೂಕಿನ ಪ್ರಮುಖ ಕ್ರೀಡಾಂಗಣವಾಗಿರುವ ಹೊಯ್ಸಳ ಕ್ರೀಡಾಂಗಣ ಹಲವು ಅವ್ಯವಸ್ಥೆಯಿಂದ ಕೂಡಿದೆ. ಪಕ್ಕದಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಶೌಚ ನೀರು ಕ್ರೀಡಾಂಗಣಕ್ಕೆ ಬರುತ್ತಿದ್ದು, ಕ್ರೀಡಾಂಗಣದಲ್ಲಿ ಶುಚಿತ್ವ ಇಲ್ಲದಾಗಿದೆ. ಹಾಗೆಯೇ ಕ್ರೀಡಾಂಗಣದಲ್ಲಿ ಯಾವುದೇ ಮೂಲಭೂತ ಸೌಲಭ್ಯ ಇಲ್ಲದಿದ್ದು ಇಲ್ಲಿಗೆ ಬರುವ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು.

ಪ್ರಸ್ತುತ ಕ್ರೀಡಾಂಗಣದ ಒಂದು ಭಾಗದಲ್ಲಿ ತಡೆಗೋಡೆ ಕಾಮಗಾರಿಯೂ ನಡೆಯುತ್ತಿದೆ. ಕ್ರೀಡಾಂಗಣದ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಕ್ರೀಡಾಂಗಣವನ್ನು ಸುಸಜ್ಜಿತವಾಗಿ ಮಾಡಬೇಕು ಎಂದು ಶಾಸಕಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು,  ಚಿಕ್ಕಮಗಳೂರು ಯುವಜನ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಮಂಜುಳಾ, ಪಿಡಬ್ಲ್ಯೂಡಿ ಅಧಿಕಾರಿಗಳು, ಮೂಡಿಗೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೆಎಸ್ಆರ್ ಟಿಸಿ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ