October 5, 2024

ಸೆಪ್ಟಂಬರ್ 05 ರಂದು ಶೃಂಗೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮೂಡಿಗೆರೆ ತಾಲ್ಲೂಕಿನ ಕಲ್ಲುಗುಡ್ಡ ಕಿರಿಯ ಪ್ರಾಥಮಿಕ ಪಾಠಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಹೆಚ್.ಎ. ಪ್ರಕಾಶ್ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ  ನೀಡಿ ಗೌರವಿಸಲಾಗಿದೆ.

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಕಲ್ಲುಗುಡ್ಡ ಶಾಲೆಯ ಮುಖ್ಯ ಶಿಕ್ಷಕರಾಗಿ ಇವರು ಶಾಲೆಯ ಅಭಿವೃದ್ಧಿ ಮತ್ತು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ತೋರಿರುವ ಮುತುವರ್ಜಿಯನ್ನು ಗಮನಿಸಿ ಪ್ರಕಾಶ್ ಅವರಿಗೆ ಈ ಗೌರವ ನೀಡಿ ಸನ್ಮಾನಿಸಲಾಗಿದೆ.

ಇವರು ಕಲ್ಲುಗುಡ್ಡ ಗ್ರಾಮದ ಶಾಲೆಯಲ್ಲಿ ಕಳೆದ 12 ವರ್ಷದಿಂದ ಶಿಕ್ಷಕರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ. ಶಾಲೆಯನ್ನು ಸುಂದರವಾಗಿ ರೂಪಿಸಿದ್ದಾರೆ. ಮಕ್ಕಳ ಹಾಜರಾತಿಯಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ. ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರಲು ತನ್ನ ಸಹಶಿಕ್ಷಕರ ಜೊತೆಗೂಡಿ ಗರಿಷ್ಠ ಪ್ರಯತ್ನ ನಡೆಸುತ್ತಿದ್ದಾರೆ.

ಸ್ಥಳೀಯವಾಗಿ ಕಾಫಿ ಎಸ್ಟೇಟ್ ಗಳಿಗೆ ಬರುವ ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಇವರು ಮುತುವರ್ಜಿ ವಹಿಸುತ್ತಿದ್ದಾರೆ. ಮಕ್ಕಳಿಗೆ ಕೃಷಿ, ಪರಿಸರ ಪ್ರಜ್ಞೆ, ವೈಜ್ಞಾನಿಕ ಮನೋಭಾವನೆ, ಸ್ವಚ್ಚತೆಯ ಅರಿವು ಮೂಡಿಸುವಲ್ಲಿ ಇವರು ಕಾರ್ಯೋನ್ಮುಖರಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲೆಯಾದರೂ ಸರಾಸರಿ 40 ವಿದ್ಯಾರ್ಥಿಗಳ ಸಂಖ್ಯೆ ಇದೆ. ಶಾಲೆಯ ವಾತಾವರಣವನ್ನು ಮಕ್ಕಳಿಗೆ ಆಕರ್ಷಕವಾಗಿ ಕಾಣುವಂತೆ ರೂಪಿಸಲಾಗಿದೆ. ಪ್ರಕಾಶ್ ಅವರ ಆಸಕ್ತಿಗೆ ಸಹ ಶಿಕ್ಷಕರು, ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರು ಸಹಕಾರ ನೀಡುತ್ತಿದ್ದಾರೆ.

ವಿದ್ಯಾರ್ಥಿ ಪೋಷಕರು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಇವರ ಸೇವೆಯನ್ನು ಪರಿಗಣಿಸಿದ ಶಿಕ್ಷಣ ಇಲಾಖೆ  ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ,

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ