October 5, 2024

ಚಾರ್ಮಾಡಿ ಘಾಟಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಸರಣಿ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ  ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಬೊಲೇರೊ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರಿ ದಾದ ದಾರಿಯಲ್ಲಿ ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್,   ಧರ್ಮಸ್ಥಳದಿಂದ ದಾರವಾಡಕ್ಕೆ ಸಾಗುತ್ತಿದ್ದ ಬೆಲೇನೋ ಕಾರು ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ   ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್ ತಡೆಗೋಡೆಗೆ ಡಿಕ್ಕಿಯಾಗಿ ತಡೆಗೋಡೆ ಕುಸಿದು ಬಿದ್ದಿದೆ.

ಈ  ಕಿರು ಸ್ಥಳದಲ್ಲಿ ಸಾವಿರ ಅಡಿಯಷ್ಟು  ಪ್ರಪಾತ ಇರುವುದರಿಂದ ತಡೆ ಗೋಡೆ ಕುಸಿದಿದ್ದು, ದಟ್ಟ ಮಂಜು ಕವಿದ ಹಿನ್ನಲೆಯಲ್ಲಿ  ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಹೆದ್ದಾರಿ ಪ್ರಾಧಿಕಾರ ಕೂಡಲೇ ತಡೆಗೋಡೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ