October 5, 2024

ಮೊಹಾಲಿಯಲ್ಲಿ ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್  ರ‍್ಯಾಕಿಂಗ್ ಪಟ್ಟಿಯಲ್ಲಿ  ಅಪರೂಪದ ಸಾಧನೆ ಮಾಡಿದೆ. ಏಕದಿನ, ಟೆಸ್ಟ್ ಹಾಗೂ ಟಿ-20 ಈ ಮೂರೂ ಮಾದರಿಗಳಲ್ಲಿ ನಂಬರ್ 1 ಪಟ್ಟಕ್ಕೇರಿದೆ.  

ಈ ಪಂದ್ಯಕ್ಕೂ ಮೊದಲು ಭಾರತ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ನಂ.1 ಸ್ಥಾನದಲ್ಲಿತ್ತು. ಆದರೆ ಏಕದಿನ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನದ ನಡುವೆ ನಂ.1 ಪಟ್ಟಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಈಗ ಆಸ್ಟ್ರೇಲಿಯಾ ಮಣಿಸಿರುವ ಭಾರತ, ಈ ಮೊದಲು ನಂಬರ್ 1 ಏಕದಿನ ತಂಡವೆನಿಸಿಕೊಂಡಿದ್ದ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿದೆ. ಈ ಮೂಲಕ ನಂಬರ್ 1 ಸ್ಥಾನಕ್ಕೇರಿದೆ. 

ಸದ್ಯ ಭಾರತ ಟಿ20 ಮಾದರಿಯಲ್ಲಿ 264 ರೇಟಿಂಗ್‌ನೊಂದಿಗೆ 1 ನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 261 ರೇಟಿಂಗ್‌ನೊಂದಿಗೆ 2 ನೇ ಸ್ಥಾನದಲ್ಲಿದೆ. ಟೆಸ್ಟ್ ನಲ್ಲಿ ಭಾರತ 118 ರೇಟಿಂಗ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಕೂಡ ಅಷ್ಟೇ ಅಂಕಗಳನ್ನು ಹೊಂದಿದೆ ಆದರೆ ಎರಡನೇ ಸ್ಥಾನದಲ್ಲಿದೆ.

ಇನ್ನು ಏಕದಿನ ಮಾದರಿಯಲ್ಲಿ  116 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭಾರತ ನಂಬರ್ 1 ಸ್ಥಾನಕ್ಕೇರಿದರೆ, ಪಾಕಿಸ್ತಾನವು 115 ರೇಟಿಂಗ್ ಪಾಯಿಂಟ್‌ಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ.

ಇಂತಹ ಸಾಧನೆ ಮಾಡಿದ ಎರಡನೇ ತಂಡ ಭಾರತ : ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಏಕಕಾಲದಲ್ಲಿ ಒಂಬರ್ ಒನ್ ಪಟ್ಟ ಪಡೆದ ವಿಶ್ವದ ಎರಡನೇ ತಂಡವಾಗಿ ಭಾರತ ಗುರುತಿಸಿಕೊಂಡಿದೆ. ಈ ಹಿಂದೆ 2012ರಲ್ಲಿ ದಕ್ಷಿಣ ಆಪ್ರಿಕಾ ತಂಡ ಮೊದಲ ಬಾರಿಗೆ ಈ ಅಪರೂಪದ ದಾಖಲೆಗೆ ಪಾತ್ರವಾಗಿತ್ತು.

ಮುಂದಿನ ತಿಂಗಳು ಭಾರತದಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿಗೂ ಮುನ್ನ ಭಾರತ ಈ ಸಾಧನೆ ಮಾಡಿರುವುದು ತಂಡದ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ.

ನಿನ್ನೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾವನ್ನು ಐದು ವಿಕೆಟ್ ಗಳಿಂದ ಗೆದ್ದು ಬೀಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ಕೊನೆಯ ಎಸೆತದಲ್ಲಿ ಆಲೌಟ್ ಆಗಿ 276 ರನ್ ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತ್ತು. ಮೊಹಮ್ಮದ್ ಶಮಿ 10 ಓವರ್ ಗಳಲ್ಲಿ 51 ರನ್ ನೀಡಿ 5 ವಿಕೆಟ್ ಗಬಳಿಸಿ ಆಸ್ಟ್ರೇಲಿಯಾ ಇನ್ನಿಂಗ್ಸ್ ಗೆ ಕಡಿವಾಣ ಹಾಕಿದರು.

ಮೊತ್ತವನ್ನು ಬೆನ್ನಟ್ಟಿದ ಭಾರತ ಉತ್ತಮ ಆರಂಭ ಪಡೆಯಿತು. ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಗಾಯಕ್ವಾಡ್ (71) ಮತ್ತು ಶುಬ್ಮನ್ ಗಿಲ್(74) ತಲಾ ಅರ್ಧಶತಕಗಳೊಂದಿಗೆ ಮೊದಲ ವಿಕೆಟ್ ಗೆ 142 ರನ್ ಗಳ ಜೊತೆಯಾಟವಾಡಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ನಾಯಕ ಕೆ.ಎಲ್. ರಾಹುಲ್ (58) ಹಾಗೂ ಸೂರ್ಯಕುಮಾರ್ ಯಾದವ್ (50) ತಂಡವನ್ನು ಸುರಕ್ಷಿತವಾಗಿ ಗೆಲುವಿನ ದಡ ಸೇರಿಸುವಲ್ಲಿ ನೆರವಾದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ