October 5, 2024

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಗ್ರಾಮೀಣ ಭಾಗದ ಜನರ ಸಾಮಾಜಿಕ ಬದುಕು ಹಸನಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಚಿಕ್ಕಮಗಳೂರು ಜಿಲ್ಲಾ ನಿರ್ದೇಶಕರಾದ ಪ್ರಕಾಶ್ ರಾವ್ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ಜ್ಞಾನ ವಿಕಾಸ ಮಹಿಳಾ ಕೇಂದ್ರದ ವತಿಯಿಂದ ಬಣಕಲ್‌ನಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟದ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪೂಜ್ಯ ವೀರೇಂದ್ರ ಹೆಗ್ಗಡೆ ಅವರ ಆಶಯದಂತೇ ಯೋಜನೆಯ ಕಾರ್ಯಕ್ರಮಗಳ ಮೂಲಕ ಜನರ ಬದುಕು ಅಭಿವೃದ್ದಿಯತ್ತ ಸಾಗಿದೆ. ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ, ಧಾರ್ಮಿಕ ಕಾರ್ಯಗಳು, ಉಳಿತಾಯ ಯೋಜನೆ, ಜನ ಜಾಗೃತಿ, ಸಿರಿ ಧಾನ್ಯಗಳ ಉತ್ಪಾದನೆ, ಮಹಿಳೆಯರಿಗೆ ಸ್ವ ಉದ್ಯೋಗ, ಕೌಶಲ್ಯ ತರಬೇತಿ ಮುಂತಾದ ಚಟುವಟಿಕೆಗಳು ಯೋಜನೆಯ ಮುಖಾಂತರ ನಡೆಯುತ್ತಿವೆ ಎಂದರು.

ಬಣಕಲ್ ಗ್ರಾ.ಪಂ ಅಧ್ಯಕ್ಷೆ ಆತಿಕಾ ಭಾನು ಮಾತನಾಡಿ, ಮಹಿಳೆಯರು ಸಂಘಟಿತವಾಗಿ ಕಾರ್ಯ ನಿರ್ವಹಿಸಿದಾಗ ವ್ಯಯಕ್ತಿಕ ಏಳಿಗೆಯ ಜೊತೆಗೆ ಸಾಮಾಜಿಕ ಏಳಿಗೆಯೂ ಸಾಧ್ಯವಾಗುತ್ತದೆ. ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪಾತ್ರ ಮಹತ್ವದಾಗಿದೆ ಎಂದರು.

ಪೂಜಾ ಸಮಿತಿ ಅಧ್ಯಕ್ಷ ರವಿ ಪೂಜಾರಿ ಮಾತನಾಡಿ, ಸಮಾಜದಲ್ಲಿ ಧಾರ್ಮಿಕ ಆಚರಣೆಗಳು ಮತ್ತು ನಂಬಿಕೆಗಳು ಕಡಿಮೆಯಾಗುತ್ತಿದ್ದು ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯಯುತ ಸಂಸ್ಕಾರವನ್ನು ಕೊಡುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಣಕಲ್ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್, ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಇಕ್ಲಾಸ್ ಅಹಮದ್, ಜೆಸಿಐ ಸ್ಥಾಪಕ ಅಧ್ಯಕ್ಷ ಸುರೇಶ್ ಶೆಟ್ಟಿ, ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಶಿವಾನಂದ, ವಲಯ ಮೇಲ್ವಿಚಾರಕರಾದ ವಿಜಯಕುಮಾರ್, ವಿವಿಧ ಒಕ್ಕೂಟ ಹಾಗೂ ಪೂಜಾ ಸಮಿತಿ, ಶೌರ್ಯ ತಂಡದ ಪದಾಧಿಕಾರಿಗಳು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ